Header Ads
Header Ads
Breaking News

ಮೂಡುಬಿದಿರೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಲೋಕಾರ್ಪಣೆ

ಪುರಸಭಾ ವ್ಯಾಪ್ತಿಯ ಕಡಲಕೆರೆ ನಿಸರ್ಗಧಾಮದಲ್ಲಿ ಅರಣ್ಯ ಇಲಾಖೆಯ ವತಿಯಿಂದ ನಿರ್ಮಿಸಿರುವ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ್ನು ಶಾಸಕ ಉಮಾನಾಥ ಕೋಟ್ಯಾನ್ ಲೋಕಾರ್ಪಣೆಗೊಳಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಕೋಟ್ಯಾನ್ ಅವರು ಕಡಲಕೆರೆಯನ್ನು ಪಿಲಿಕುಳ ನಿಸರ್ಗಧಾಮ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಈ ನಿಟ್ಟಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಯೋಜನೆಗಳನ್ನು ಅನುಷ್ಠಾನಗೊಳಿಸಲು 3 ಕೋಟಿ ರೂಪಾಯಿಯ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ. ರೋಟರಿ ಸಹಿತ ಖಾಸಗಿ ಸಂಸ್ಥೆಗಳು ಕೈಜೋಡಿಸಬೇಕು ಎಂದು ಹೇಳಿದರು. ಅಪರ ಪ್ರಧಾನ ಅರಣ್ಯಾಧಿಕಾರಿ ಬ್ರಿಜೇಶ್‍ಕುಮಾರ್ ಮಾತನಾಡಿ, ರಾಜ್ಯದಲ್ಲಿ 130 ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ್ನು ನಿರ್ಮಿಸಿದ್ದು225 ಉದ್ಯಾನವನವನ್ನು ನಿರ್ಮಿಸುವ ಗುರಿ ಹೊಂದಿದೆ. ಎಂದರು.ಮಂಗಳೂರು ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್, ಕುಂದಾಪುರ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಕಮಲ ಕರಿಕ್ಕರನ್, ಮೂಡುಬಿದಿರೆ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಅಚ್ಚಪ್ಪ, ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ, ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಸಿ.ಎಚ್ ಗಫೂರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *