Header Ads
Header Ads
Breaking News

ಮೂಡುಬಿದಿರೆ:75ನೇ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಕ್ರೀಡಾಕೂಟ ಸಮಾರೋಪ

 ಸ್ವರಾಜ್ಯ ಮೈದಾನದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಕಳೆದ5ದಿನಗಳಿಂದ ನಡೆದ 75ನೇ ಅಖಿಲ ಭಾರತ ಅಥ್ಲೆಟಿಕ್ಸ್ ಕ್ರೀಡಾಕೂಟವು ಗುರುವಾರ ಮುಕ್ತಾಯಗೊಂಡಿದ್ದು, ಇದರ ಸಮಾರೋಪ ಸಮಾರಂಭವು ನಡೆಯಿತು.ಸಮಾರಂಭದದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌ರವರು, ಈ ಹಿಂದೆ ಮೂಡುಬಿದಿರೆಯಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಸಿದ್ಧರಾಮಯ್ಯ ಸರ್ಕಾರವು ಕ್ರೀಡಾಕೂಟ ನಡೆಯುವ ಮೊದಲೇ ಅನುದಾನವನ್ನು ಕೊಟ್ಟಿದೆ. ಈ ಕ್ರೀಡಾಕೂಟಕ್ಕೆ ಅನುಕೂಲವಾಗುವಂತೆ ಸರ್ಕಾರದಿಂದ ಅನುದಾನ ಕೊಡಿಸುವಂತೆ ಮಾಡಿ ಕ್ರೀಡಾ ಚಟುವಟಿಕೆಯು ಮುಂದುವರಿಯುವಂತೆ ಮಾಡಲು ಸರ್ಕಾರದ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಬಿ ಯಶೋವರ್ಮ ಭಾಗವಹಿಸಿ ಮಾತನಾಡಿದರು.ಕ್ರೀಡಾಕೂಟದ ಕಾರ್ಯಕಾರಿ ಅಧ್ಯಕ್ಷ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ “ನಮ್ಮ ದೇಶದ ಯುವಕರ ಸಂಖ್ಯೆ ಸುಮರು 20 ಕೋಟಿಯಷ್ಟಿದೆ. ಆದರೆ ಸಾಂಸ್ಕೃತಿಕ, ಕ್ರೀಡೆ, ಎನ್‌ಸಿಸಿ, ಎನ್‌ಎಸ್‌ಎಸ್ ಈ ಎಲ್ಲಾ ಆಯಾಮಗಲ್ಲಿ ಚಿಂತಿಸಿದಾಗ ಸಾಮರ್ಥ್ಯವಿದ್ದರೂ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಲುತ್ತಿದ್ದಾರೆ. ಇದಕ್ಕೆ ಕಾರಣ ನಮ್ಮಲ್ಲಿನ ಪ್ರೋತ್ಸಾಹದ ಮನಸ್ಸುಗಳ ಕೊರತೆ ಮತ್ತು ಸರ್ಕಾರದ ನಿಷ್ಕಾಳಜಿ. ವೋಟಿಗಾಗಿ ಸಾಕಷ್ಟು ನಾಟಕ ಮಾಡುವ ನಮ್ಮ ರಾಜಕಾರಣಿಗಳು, ಅಧಿಕಾರ ಹಿಡಿದಾಗ ಯುವಕರ ಬೆಳವಣಿಗೆಗೆ ಶ್ರಮಿಸುವುದಿಲ್ಲ. ಬದಲಿಗೆ ಅವರನ್ನು ದೂರುವ ಕೆಲಸದಲ್ಲಿ ತೊಡಗುತ್ತಾರೆ. ಇಂಥಹ ಸರ್ಕಾರಗಳಿಗೆ ಯುವಕರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ” ಎಂದು ಕಿಡಿಕಾರಿದರು.

ಇದೇ ಸಂದರ್ಭದಲ್ಲಿ ಮಂಗಳೂರು ವಿವಿಯ ಹೆಮ್ಮೆಯ ಕ್ರೀಡಾಪಟುಗಳಾದ ಪ್ರವೀಣ್ ಚಿತ್ರವೇಲ್(1,00,000ರೂ ನಗದು ಬಹುಮಾನ ಸಹಿತ), ಇಲಕ್ಯಾದಾಸನ, ಅಭಿನಯ ಶೆಟ್ಟಿ ಹಾಗೂ ಪ್ರಜ್ವಲ್ ಮಂದಣ್ಣರನ್ನು ಸನ್ಮಾನಿಸಲಾಯಿತು. ಇದೇ ವೇಳೆ ರೀಯೋ ಒಲಂಪಿಕ್ಸ್‌ನ 4*400 ಮೀ ರಿಲೇಯಲ್ಲಿ ಭಾಗಿಯಾಗಿದ್ದ ಕ್ಯಾಲಿಕಟ್ ವಿವಿಯ ಜಿಷ್ಣ ಮ್ಯಾಥಿವ್‌ರನ್ನು ಸಮ್ಮಾನಿಸಲಾಯಿತು. ಈ ಬಾರಿಯ ಕ್ರೀಡಾಕೂಟದಲ್ಲಿ ದಾಖಲೆ ಮಾಡಿದ ಕ್ರೀಡಾಪಟುಗಳನ್ನು ಗೌರವಿಸಲಾಯಿತು.

ಕ್ರೀಡಾಕೂಟಯ ಆಯೋಜನೆಯಲ್ಲಿ ಎಲ್ಲಾ ರೀತಿಯಿಂದಲೂ ಪ್ರೋತ್ಸಾಹ ಮತ್ತು ಬೆಂಬಲ ನೀಡಿದ ಡಾ. ಎಂ. ಮೋಹನ್ ಆಳ್ವರನ್ನು ಮಂಗಳೂರು ವಿವಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮಾಜಿ ಕ್ರೀಡಾಪಟು ಸುಕುಮಾರನ್, ಅಖಿಲ ಭಾರತ ಕ್ರೀಡಾ ವೀಕ್ಷಕರಾದ ಎಸ್. ಆರ್.ಎಮ್ ವಿವಿಯ ಕ್ರೀಡಾ ನಿರ್ದೇಶಕ ಪ್ರೊ. ಕೆ. ವೈದ್ಯನಾಥನ್, ಮದ್ರಾಸ್ ವಿವಿಯ ಕ್ರೀಡಾ ನಿರ್ದೇಶಕ ಡಾ. ವಿ. ಮಹಾದೇವನ್ ಹಾಗೂ ಜೈಪುರದ ಮಣಿಪಾಲ ವಿವಿಯ ಕ್ರೀಡಾ ನಿರ್ದೇಶಕಿ ಡಾ. ರೀನಾ ಪೂನಿಯಾ, ಮಂಗಳೂರು ವಿವಿಯ ದೈಹಿಕ ನಿರ್ದೇಶಕ ಡಾ ಕಿಶೋರ್ ಕುಮಾರ್, ಕ್ರೀಡಾ ಉದ್ಘೋಷಕರಾದ ಸತೀಶ್, ಮುತ್ತು ಉಪಸ್ಥಿತರಿದ್ದರು

Related posts

Leave a Reply