Header Ads
Breaking News

ಬಿಜೆಪಿ ಬೆಂಬಲಿತ ಅಧ್ಯಕ್ಷ-ಉಪಾಧ್ಯಕ್ಷರುಗಳಿಗೆ ಅಭಿನಂದನೆ : ಬಿಜೆಪಿ ಮೂಡುಬಿದಿರೆ ಮಂಡಲ ಕಚೇರಿಯಲ್ಲಿ ನಡೆದ ಕಾರ್ಯಕ್ರಮ

ತೆಂಕಮಿಜಾರು, ಪಾಲಡ್ಕ, ಬೆಳುವಾಯಿ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಮೂಡುಬಿದಿರೆ ಮಂಡಲ ಕಚೇರಿಯಲ್ಲಿ ಅವರನ್ನು ಅಭಿನಂದಿಸಲಾಯಿತು.

ಅಧ್ಯಕ್ಷ-ಉಪಾಧ್ಯಕ್ಷರುಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿರುವ ತೆಂಕಮಿಜಾರು ಗ್ರಾ.ಪಂನ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ರುಕ್ಮಿಣಿ, ಉಪಾಧ್ಯಕ್ಷೆ-ಸಮಿತಾ ಶೆಟ್ಟಿ, ಪಾಲಡ್ಕ ಗ್ರಾ.ಪಂನ ಅಧ್ಯಕ್ಷ -ದಿನೇಶ್ ಕಾಂಗ್ಲಾಯಿ, ಉಪಾಧ್ಯಕ್ಷ ಸುಕೇಶ್ ಶೆಟ್ಟಿ, ಬೆಳುವಾಯಿ ಗ್ರಾ.ಪಂಚಾಯತ್‍ನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಶೀಲ, ಉಪಾಧ್ಯಕ್ಷ ರವೀಂದ್ರ ಪೂಜಾರಿ ಅವರನ್ನು ಶಾಸಕ ಉಮಾನಾಥ ಕೋಟ್ಯಾನ್ ಅಭಿನಂದಿಸಿದರು.

ನಂತರ ಮಾತನಾಡಿದ ಉಮಾನಾಥ್ ಕೋಟ್ಯಾನ್, ಹುದ್ದೆ ಎಂಬುದು ಜವಾಬ್ದಾರಿ. ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವವರು ಪಕ್ಷ ಬೇಧ ಮರೆತು ತಮ್ಮ ಊರಿನ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಮತ್ತು ಪಕ್ಷದ ಹಿರಿಯರ, ಅನುಭವಸ್ಥರ ಸಲಹೆ ಮಾರ್ಗದರ್ಶನದೊಂದಿಗೆ ಮುಂದುವರೆಯಬೇಕು ಎಂದು ಹೇಳಿದರು. ಪಂಚಾಯತ್ ಚುನಾವಣೆಯ ಉಸ್ತುವಾರಿಯನ್ನು ವಹಿಸಿದ್ದ ನಾಗರಾಜ ಪೂಜಾರಿ, ದಿನೇಶ್ ಪೂಜಾರಿ ಅವರನ್ನು ಗೌರವಿಸಲಾಯಿತು. ಈ ವೇಳೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ತಾ.ಪಂ ಉಪಾಧ್ಯಕ್ಷ ಸಂತೋಷ್,ಬಿಜೆಪಿ ಮಂಡಲ ಉಪಾಧ್ಯಕ್ಷ ಅಜೇಯ್ ರೈ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರಾ, ಪುತ್ತಿಗೆ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *