Header Ads
Breaking News

ಮೇ.11ರಿಂದ 13ರವರೆಗೆ ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಬ್ರಹ್ಮಕಲಶೋತ್ಸವ

ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಬ್ರಹ್ಮಕಲಶೋತ್ಸವ ಮೇ.11ರಿಂದ 13ರವರೆಗೆ ನಡೆಯಲಿದ್ದು, ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸ ಭಕ್ತರ ಸಹಕಾರದಿಂದ ಪೂರ್ಣಗೊಂಡಿದ್ದು, ಬ್ರಹ್ಮಕಲಶೋತ್ಸವದಲ್ಲಿ ಹತ್ತು ಸಾವಿರ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಗೌರವಾಧ್ಯಕ್ಷ ಪ್ರಶಾಂತ ಕಾಜವ ಮಿತ್ತಕೋಡಿ ಅವರು ಶ್ರೀ ಕ್ಷೇತ್ರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ಶ್ರೀನಿವಾಸ ಶೆಟ್ಟಿ ಪುಲ್ಲು ಮಾತನಾಡಿ, ಮೇ.11ರಂದು ಸಂಜೆ ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ವೈಭವದ ಹಸಿರು ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ. ಸಂಜೆ ಏಳು ಗಂಟೆಗೆ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮ ಚಂದ್ರಹಾಸ ಅಡ್ಯಂತಾಯ ಕುತ್ತಾರ್ ಗುತ್ತು ಉದ್ಘಾಟಿಸಲಿದ್ದಾರೆ. ಬಾಬು ಶ್ರೀ ಶಾಸ್ತ ಕಿನ್ಯ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ, ತೇವುನಾಡುಗುತ್ತು ರಾಮ್ ಮೋಹನ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೇ.12ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ 38 ಗುರುಸ್ವಾಮಿಗಳಿಗೆ ಗೌರವಾರ್ಪಣೆ ನಡೆಯಲಿದೆ ಎಂದು ತಿಳಿಸಿದರು.

ಮೇ.13ರಂದು ಬೆಳಗ್ಗೆ ಶ್ರೀ ಅಯ್ಯಪ್ಪ ದೇವರ ನೂತನ ಬಿಂಬ ಪ್ರತಿಷ್ಟೆ, 108 ಕಲಶಾಭಿಷೇಕ ಸಹಸ್ರನಾಮ ಹೋಮ, ಮಹಾಪೂಜೆ ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮ ವಿವೇಕ್ ಶೆಟ್ಟಿ ಬೊಳ್ಯಗುತ್ತು ಉದ್ಘಾಟಿಸುವರು. ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಚಿವ ಯು.ಟಿ.ಖಾದರ್, ಪದ್ಮನಾಭ ಕೋಟ್ಯಾನ್, ಕೋಟ ಶ್ರೀನಿವಾಸ ಪೂಜಾರಿ, ಕುಂಬ್ಳೆ ಸುಂದರ ರಾವ್, ನಿತ್ಯಾನಂದ ಮುಂಡೋಡಿ, ವಸಂತ ಬಂಗೇರ, ಅಜಿತ್ ಕುಮಾರ್ ರೈ ಮಾಲಾಡಿ, ಉದಯ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ ದಡಸ್, ಗೌರವಾಧ್ಯಕ್ಷ ಸುರೇಶ್ ಚೌಟ ಕಕ್ಕೆಮಜಲು, ಆರ್ಥಿಕ ಸಮಿತಿ ಸಂಚಾಲಕ ಮಂಜುನಾಥ ಆಳ್ವ, ಕಾರ್ಯಾಧ್ಯಕ್ಷ ವಿಶ್ವನಾಥ ನಾಯ್ಕ್, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಪಟ್ಟೋರಿ, ಸಂಚಾಲಕ ಆನಂದ ಕೆ.ಅಸೈಗೋಳಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ತ್ಯಾಗಂ ಹರೇಕಳ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *