Header Ads
Breaking News

ಮೇ1 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಕಾರ್ಮಿಕ ದಿನಾಚರಣೆ

ಅಖಿಲ ಭಾರತ ಕಾರ್ಮಿಕ ಸಂಘದಿಂದ ಮೇ 1ರಂದು ಕಾರ್ಮಿಕ ದಿನಾಚರಣೆಯಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಆಚರಿಸಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಅಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ ಜಕ್ರಬೆಟ್ಟು ತಿಳಿಸಿದರು.

ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ದತ್ತಯಜ್ಞ, ಅನ್ನಸಂತರ್ಪಣೆ, ಗೋಪೂಜೆ, ಬದುಕು ಬದುಕಲು ಬಿಡು ಸಮಾವೇಶ ಯೋಧರಿಗೆ ಸನ್ಮಾನ, ನಿರಾಶ್ರಿತ ಮಹಿಳೆಯರಿಗೆ ಮನೆ ನಿರ್ಮಾಣಕ್ಕೆ ಸಹಾಯಹಸ್ತ, ವಿದ್ಯಾರ್ಥಿ ವೇತನ ಹಾಗೂ ಯಕ್ಷಗಾನ ನಾಟ್ಯ, ಹಾಸ್ಯವೈಭವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಮಿಕರಿಗೆ ಇಎಸ್‍ಐಸಿ ಭದ್ರತೆಯನ್ನು ನೀಡಲಾಗಿದೆ. ಇದಕ್ಕೆ ಭಾರತ ಸರ್ಕಾರ ಮತ್ತು ಕರ್ನಾಟಕ ಸರಕಾರ ಶ್ರಮಿಸುತ್ತಿದೆ ಎಂದ ಅವರು, ಇಎಸ್‍ಐ ಸಭಾಂಗಣದಲ್ಲಿ ಪ್ರತೀ ಮೂರು ತಿಂಗಳಿಗೊಮ್ಮೆ ಆರು ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಕುಂದುಕೊರತೆ ಸಭೆಯನ್ನು ಕೂಡ ನಡೆಸಲಾಗುತ್ತಿದೆ. ಇನ್ನು ಮೇ 1ರಂದು ನಡೆಯುವ ಕಾರ್ಮಿಕ ದಿನಾಚರಣೆ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಇಎಸ್‍ಐ ಆಸ್ಪತ್ರೆಯ ಕುಂದುಕೊರತೆ ಸಮಿತಿಯ ಸದಸ್ಯರಾದ ಸುದತ್ತ ಜೈನ್ ಶಿರ್ತಾಡಿ, ಸಂತೋಷ್ ಕಾವೂರು, ಅಶೋಕ್ ಪೂಜಾರಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *