Header Ads
Header Ads
Breaking News

ಮೊಂಟೆಪದವು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಯೋಗ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ

ಎಷ್ಟು ಕಟ್ಟಡ ಕಟ್ಟಿದರೂ, ಎಷ್ಟೇ ವ್ಯವಸ್ಥೆ ಮಾಡಿದರೂ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗದಿದ್ದರೆ ಪ್ರಯೋಜನವಿಲ್ಲ. ಈಗಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿ ಈ ವರ್ಷದ ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ತಂದರೆ ಇನ್ನಷ್ಟು ಅನುದಾನ ತಂದು ಮುಂದಕ್ಕೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.  92 ಲಕ್ಷ ಅನುದಾನದಲ್ಲಿ ಮೊಂಟೆಪದವು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹೆಚ್ಚುವರಿ ಕಟ್ಟಡ, ಪ್ರಯೋಗ ಶಾಲೆ ನಿರ್ಮಾಣಕ್ಕೆ ಮಂಗಳವಾರ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದರು. ಹಿರಿಯರಾದ ಗೋಪಾಲ ಭಟ್ ಶಿಲಾನ್ಯಾಸಗೈದರು. ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸದಸ್ಯ ಹೈದರ್ ಕೈರಂಗಳ, ನರಿಂಗಾನ ಗ್ರಾ.ಪಂ. ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ, ಆಡಳಿತ ಸಮಿತಿಯ ಅಬ್ದುಲ್ ಜಲೀಲ್ ಮೋಂಟುಗೋಳಿ, ಇನ್ನಿತರರು ಉಪಸ್ಥಿತರಿದ್ದರು

Related posts

Leave a Reply

Your email address will not be published. Required fields are marked *