Header Ads
Header Ads
Breaking News

ಮೋದಿ ನೇತೃತ್ವದ ಆಡಳಿತದಲ್ಲಿ ಸಂಪೂರ್ಣ ವಿಫಲತೆ:ಸಚಿವ ಯು.ಟಿ. ಖಾದರ್ ಹೇಳಿಕೆ

ಪುತ್ತೂರು; ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ನಾಲ್ಕೂವರೆ ವರ್ಷಗಳ ಆಡಳಿತದಲ್ಲಿ ಸಂಪೂರ್ಣ ವಿಫಲತೆ ಕಂಡಿದ್ದು, ದೇಶ ತಲೆ ತಗ್ಗಿಸುವಂತಾಗಿದೆ. ಪ್ರಸ್ತುತ ವಿದ್ಯಾಮಾನಗಳಿಂದಾಗಿ ದೇಶ ಅಭದ್ರತೆ ಸ್ಥಿತಿಯಲ್ಲಿದ್ದು, ಪಾಕಿಸ್ತಾನಕ್ಕೆ ಬುದ್ದಿ ಕಲಿಸುವಲ್ಲಿ ಪ್ರಧಾನಿ ಇಂದಿರಾಗಾಂಧಿ ತೋರಿದ್ದ ಧೈರ್ಯದ ಶೇ.10 ರಷ್ಟಾದರೂ ಧೈರ್ಯವನ್ನು ನರೇಂದ್ರ ಮೋದಿ ತೋರಿಸಬೇಕಿತ್ತು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ನೀತಿ ಆಯೋಗದ ಅಧ್ಯಕ್ಷರು ರಾಜೀನಾಮೆ ಕೊಟ್ಟು ಮನೆಗೆ ಹೋಗಿದ್ದಾರೆ. ರಿಜರ್ವ್ ಬ್ಯಾಂಕ್ ಗವರ್ನರ್ ರಾಜೀನಾಮೆ ನೀಡಿದ್ದಾರೆ. ಸುಪ್ರೀಂ ಕೋರ್ಟಿನ 4 ಮಂದಿ ನ್ಯಾಯಾಧೀಶರು ಸುದ್ದಿಗೋಷ್ಟಿಯಲ್ಲಿ ಅತೃಪ್ತಿ ವ್ಯಕ್ತ ಪಡಿಸಿದ್ದಾರೆ. ದೇಶದಲ್ಲಿ ಅತ್ಯಂತ ಕಡಿಮೆ ಉದ್ಯೋಗ ಸೃಷ್ಠಿಯಾಗಿದೆ. ದೇಶಕ್ಕೆ ಬೆಂಬಲ ನೀಡದ ಪಕ್ಷದೊಂದಿಗೆ ಕಾಶ್ಮೀರದಲ್ಲಿ ಆಡಳಿತ ನಡೆಸಿದ್ದಾರೆ. ಇದಕ್ಕೆ ಮೋದಿ ದೇಶದ ಜನತೆಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಕಾಶ್ಮೀರದಲ್ಲಿ ನಡೆದ ಘಟನೆ ಅತ್ಯಂತ ನೋವಿನ ವಿಚಾರ. ಇದು ದೇಶಕ್ಕೆ ಒಡ್ಡಿದ ಬಹುದೊಡ್ಡ ಸವಾಲು ಎಂದ ಅವರು ಮುನ್ನೂರು ಕೆಜಿ ಸ್ಪೋಟಕಗಳನ್ನು ಪುಲ್ವಾಮಕ್ಕೆ ತರಲು 3 ದಿನಗಳು ಬೇಕಾಗಿದ್ದರೂ ಕೇಂದ್ರ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಎಂದು ಅವರು ಪ್ರಶ್ನಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂಎಸ್ ಮಹಮ್ಮದ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ಮುಖಂಡ ನಝೀರ್ ಮಠ ಇದ್ದರು.

Related posts

Leave a Reply

Your email address will not be published. Required fields are marked *