Header Ads
Breaking News

ಮೋದಿ ಸಮಾವೇಶದಲ್ಲಿ1 ಲಕ್ಷಕ್ಕೂ ಅಧಿಕ ಮಂದಿ ಭಾಗಿ: ಆರ್. ಅಶೋಕ್ ಹೇಳಿಕೆ

ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಎಪ್ರಿಲ್ 13ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಲಿದ್ದು,1ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳೂರಿನಲ್ಲಿ ಮಾಜಿ ಡಿಸಿಎಂ ಆರ್ ಅಶೋಕ್ ಹೇಳಿದರು.

ಈ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೋದಿ ಆಗಮನದಿಂದಾಗಿ ಹವಾ ಸುಂಟರಗಾಳಿಯಾಗಲಿದೆ ಎಂದು ಹೇಳಿದರು. ಮಂಡ್ಯದಲ್ಲಿ ಕಾಂಗ್ರೆಸ್ಸಿಗರೇ ಜೆಡಿಎಸ್ ಸೋಲಿಸಲು ಪಣತೊಟ್ಟಿದ್ದಾರೆ. ಹಾಸನದ ಕಾಂಗ್ರೆಸ್, ಮೈಸೂರು ಜೆಡಿಎಸ್ ಸಭೆಯಲ್ಲಿ ಮೋದಿ ಮೋದಿ ಎಂದು ಕೂಗುತ್ತಾರೆ. ಬಿಜೆಪಿಯಲ್ಲಿ ಸಾಮಾನ್ಯವಾಗಿದ್ದ ಮೋದಿ ಘೋಷಣೆ ಸರ್ವವ್ಯಾಪಿಯಾಗಿದೆ. ಡಿಕೆ ಶಿವಕುಮಾರ್, ಪರಮೇಶ್ವರ್, ಕುಮಾರಸ್ವಾಮಿ, ದೇವೇಗೌಡರಿಗೆ ಮಾತ್ರ ಈ ಮೈತ್ರಿ ಸಿದ್ದರಾಮಯ್ಯ ಕೂಡಾ ಈ ಮೈತ್ರಿಯಲಿಲ್ಲ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *