Header Ads
Header Ads
Header Ads
Breaking News

ಯುಬಿಎಂಸಿ ಶಾಲೆಯ ಪ್ರತಿಭಾ ಪುರಸ್ಕಾರ ಜೆಡಿಎಸ್ ಜಿಲ್ಲಾದ್ಯಕ್ಷ ಯೋಗೀಶ್ ಶೆಟ್ಟಿ ಬಹುಮಾನ ವಿತರಣೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿಯ ಮಿಶನ್ ಕಂಪೌಂಡ್ ಬಳಿ ಇರುವ ಯುಬಿಎಂಸಿ ಪ್ರಾರ್ಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಶಾಲಾ ಸಭಾಂಗಣದಲ್ಲಿ ನಡೆಯಿತು.ಸಮಾರಂಭದಲ್ಲಿ ಜೆಡಿಎಸ್ ಜಿಲ್ಲಾದ್ಯಕ್ಷ ಯೋಗೀಶ್ ಶೆಟ್ಟಿ ಕಾಪು ಭಾಗವಹಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಈ ಸಂದರ್ಬದಲ್ಲಿ ಮಾತನಾಡಿದ ಅವರು ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಿಗೆ ತಾವು ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಬಗ್ಗೆ ಕೀಳರಿಮೆ ಇದೆ. ಈ ಕೀಳರಿಮೆಯನ್ನು ಮೊದಲು ತೊಡೆದು ಹಾಕಬೇಕು.

ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಕೀಳರಿಮೆ ತೊಡೆದು ಹಾಕಿದಾಗ ಅವರ ಪ್ರತಿಭೆ ಹೊರಬರಲು ಸಾದ್ಯ ಎಂದರು. ಸಮಾರಂಭದಲ್ಲಿ ಶಾಲಾ ಸಂಚಾಲಕ ಸ್ಟೀವನ್ ಸರ್ವೋತ್ತಮ, ಶಾಲಾ ಮುಖ್ಯೋಪದ್ಯಾಯಿನಿ ಓಫಿಲಿಯಾ ಸುಹಾಸಿನಿ, ಕ್ರಿಶ್ಚಿಯನ್ ಪ್ರೌಢ ಶಾಲೆಯ ಮುಖ್ಯೋಪದ್ಯಾಯಿನಿ ಹೆಲೆನ್ ಸಾಲಿನ್ಸ್ ಮುಂತಾದವರು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವರದಿ:ಪಲ್ಲವಿ ಸಂತೋಷ್

Related posts

Leave a Reply