Header Ads
Header Ads
Breaking News

ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ,ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಿ:ಬಿ.ಕೆ. ಸೇಸಪ್ಪ ಬೆದ್ರಕಾಡು ಆಗ್ರಹ

ವಿಟ್ಲ: ಇತ್ತೀಚೆಗೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ಯಾಂಗ್‌ರೇಪ್‌ಗೆ ಒಳಗಾದ ಬಾಳ್ತಿಲ ಗ್ರಾಮದ ನೊಂದ ಯುವತಿಗೆ ನ್ಯಾಯ ಒದಗಿಸಬೇಕು. ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಒತ್ತಾಯಿಸಿದ್ದಾರೆ.

ಅವರು ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇದೊಂದು ನೀಚ ಘಟನೆಯಾಗಿದೆ. ಈ ಘಟನೆ ಘಟನೆಯನ್ನು ಖಂಡಿಸುತ್ತೇವೆ ನೊಂದ ಬಾಲಕಿಯ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ನಿಯೋಗ ಬೇಟಿ ನೀಡಿ ಸಾಂತ್ವನ ಹೇಳಲಾಗಿದೆ. ಆರೋಪಿಗಳ ಪರವಾಗಿ ಯಾವುದೇ ವಕೀಲರು ವಾದಿಸಬಾರದು. ಆರೋಪಿಗಳಿಗೆ ತ್ವರಿತಗತಿಯಲ್ಲಿ ಗಲ್ಲುಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಗೋಪಾಲ ಕೆ ನೇರಳಕಟ್ಟೆ, ಗೌರವ ಸಲಹೆಗಾರ ಮೋಹನದಾಸ ಯು ವಿಟ್ಲ, ತಾಲ್ಲೂಕು ಅಧ್ಯಕ್ಷ ಸೋಮಪ್ಪ ಸುರುಳಿಮೂಲೆ, ಬಿ.ಕೆ ಪ್ರಸಾದ್ ಅನಂತಾಡಿ ಉಪಸ್ಥಿತರಿದ್ದರು.

Related posts

Leave a Reply