Header Ads
Header Ads
Breaking News

ಯುವ ಕಾಂಗ್ರೆಸ್‌ನಿಂದ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ, ಕೇಂದ್ರ ಸರ್ಕಾರದ ವಿರುದ್ದ ಮಹಮ್ಮದ್ ಮೋನು ವಾಗ್ದಾಳಿ

ಕಳೆದ ಮೂರು ವರ್ಷದ ಕೇಂದ್ರ ಸರಕಾರದ ಆಡಳಿತದಲ್ಲಿ ರೈತರಿಂದ ಹಿಡಿದು ಜನಸಾಮಾನ್ಯರೆಲ್ಲ ತೊಂದರೆ ಅನುಭವಿಸುತ್ತಿದ್ದು ಇನ್ನು ಎರಡೇ ವರ್ಷದಲ್ಲಿ ನರೇಂದ್ರ ಮೋದಿಯ ಸರಕಾರ ಹೋಗಿ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಬರಲಿದೆ ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಅಭಿಪ್ರಾಯಪಟ್ಟರು.
ಮಂಗಳೂರು ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್‌ನ ಆಶ್ರಯದಲ್ಲಿ ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲು ಒತ್ತಾಯಿಸಿ ತೊಕ್ಕೊಟ್ಟು ಎಸ್‌ಬಿಐ ಬ್ಯಾಂಕ್‌ನ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಬಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವಿದ್ದಾಗ ರೈತರ ಸಾಲ ಮನ್ನಾ ಮಾಡಿದರೆ ಬೊಕ್ಕಸ ತುಂಬಲು ಸಾದ್ಯವಿಲ್ಲ ಎಂದಿದ್ದರು. ಆದರೆ ಇಂದು ಅದೇ ಯಡಿಯೂಪ್ಪ ಪ್ರತೀ ಜಿಲ್ಲೆಗೆ ಹೋಗಿ ಸಿದ್ಧರಾಮಯ್ಯ ಅವರು ಸಾಲ ಮನ್ನಾ ಮಾಡುತ್ತಿಲ್ಲ ಎಂದು ಬೊಬ್ಬೆ ಹಾಕುತ್ತಿರುವುದು ನಾಚಿಕೆಗೇಡು ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್. ಎಸ್. ಕರೀಂ, ತಾಪಂ ಸದಸ್ಯರಾದ ಸಿದ್ಧೀಕ್ ಕೊಳಂಗೆರೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply