Header Ads
Breaking News

ಯುವ ಕೇಸರಿ ಶಿವ ತೀರ್ಥಪದವು ಮುಳಿಂಜ : 11ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಯುವ ಕೇಸರಿ ಶಿವತೀರ್ಥಪದವು ಮುಳಿಂಜ ಇದರ 11ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಮುಳಿಂಜ ಕ್ಷೇತ್ರ ವಾರ್ಷಿಕ ಜಾತ್ರಾ ಮಹೋತ್ಸವದ ಕೊನೆಯ ದಿನದಂದು ನಡೆಯಿತು.ಇದರಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಖಾಸಗಿ ಸುದ್ದಿವಾಹಿನಿಯ ಪ್ರಧಾನ ನಿರೂಪಕ ಜಯಪ್ರಕಾಶ್ ಶೆಟ್ಟಿ ಉಪ್ಪಳ ಅವರಿಗೆ “ಮಾಧ್ಯಮರತ್ನ ಪ್ರಶಸ್ತಿ” ನೀಡಿ ಸನ್ಮಾನಿಸಲಾಯಿತು. ಮುಳಿಂಜ ಶ್ರೀಮಹಾಲಿಂಗೇಶ್ವರ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷರಾದ ಹರಿನಾಥ ಭಂಡಾರಿ ಮುಳಿಂಜಗುತ್ತು ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಸಾಧನೆಗೈದ ಕೊಂಡೆವೂರಿನ ವೈಷ್ಣವಿ ಕೆ. ಶೆಟ್ಟಿ ಅವರಿಗೆ ವಿದ್ಯಾರತ್ನ ಪ್ರಶಸ್ತಿ ಪ್ರದಾನಿಸಲಾಯಿತು. ಈ ಸಂದರ್ಭದಲ್ಲಿ ಕಲಾ ಸಂಗಮ ಕುಡ್ಲ ಇದರ ನಿರ್ದೇಶಕರಾದ ಚಂದ್ರಕುಮಾರ್ ಕೊಡಿಯಲ್ ಬೈಲ್, ಮುಳಿಂಜ ಶ್ರೀಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಜಯರಾಮ ಶೆಟ್ಟಿ ಕಡಂಬಾರು, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *