Header Ads
Breaking News

ಯೂತ್ ಫೌಂಡೇಶನ್ ಪಡುಬಿದ್ರಿ ವತಿಯಿಂದ ಪಡುಬಿದ್ರಿಯಲ್ಲಿ ಶಿಕ್ಷಕರ ದಿನಾಚರಣೆ

ಯೂತ್ ಫೌಂಡೇಶನ್ ಪಡುಬಿದ್ರಿ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ತಲಪಾಡಿಯ ಫಲಾಹ್ ವಿದ್ಯಾಸಂಸ್ಥೆಯಲ್ಲಿ ಪ್ರಾಂಶುಪಾಲರಾದ ಅಬ್ದುಲ್ ಖಾದರ್ ಹುಸೇನ್‍ರವರನ್ನು ಉರ್ದು ಶಾಲೆಯ ಸಭಾಂಗಣದಲ್ಲಿ ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೂತ್ ಫೌಂಡೇಶನ್ ಪಡುಬಿದ್ರಿ ಅಧ್ಯಕ್ಷ ಅಬ್ದುಲ್ ಹಮೀದ್, ಪ್ರಜ್ಞಾವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ದಿನದಂದು ಶಿಕ್ಷಕರನ್ನು ಗೌರವಿಸುವ ಕೆಲಸ ಆಗಬೇಕಾಗಿದೆ ಎಂದರು.ಈ ಸಂದರ್ಭ ಉರ್ದು ಶಾಲಾ ಸಂಚಾಲಕ ಶಬ್ಬೀರ್ ಹುಸೈನ್, ಪಡುಬಿದ್ರಿ ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷ ಹಾಜಿ ಪಿ.ಎ. ಅಬ್ದುಲ್ ರಹ್ಮಾನ್, ಉರ್ದು ಶಾಲೆಯ ಮುಖ್ಯ ಶಿಕ್ಷಕ ಶಫಿಯುಲ್ಲಾ, ಫೌಂಡೇಶನ್ ಉಪಾಧ್ಯಕ್ಷ ಕೌಸರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *