Header Ads
Breaking News

ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಜಾಗೃತಿ ಕಾರ್ಯಕ್ರಮ

ಮಂಗಳೂರು ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಎಪ್ರಿಲ್ 8 ರಂದು ವಿಶ್ವ ಆರೋಗ್ಯ ದಿನಾಚರಣೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ವೈದ್ಯಕೀಯ ಅಧೀಕ್ಷಕರಾದ ಡಾ.ಸಂಪತ್ತಿಲ ಪದ್ಮನಾಭರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾಮಾನ್ಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ. ಪ್ರಭಾ ಅಧಿಕಾರಿ ವ್ಯಕ್ತಿಯೊಬ್ಬರಿಗೆ ರಕ್ತದ ಒತ್ತಡವನ್ನು ಪರೀಕ್ಷೆ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ನಾನಾ ಕಾಯಿಲೆ ಗಳಿಂದ ಹಾಗೂ ಕಾಲರಾ, ಮಲೇರಿಯಾ ಡೆಂಗ್ಯು ಮುಂತಾದ ಸಾಂಕ್ರಾಮಿಕ ಖಾಯಿಲೆಗಳನ್ನು ತಡೆಗಟ್ಟುವ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಆಸ್ಪತ್ರೆ ಆಡಳಿತ ಮತ್ತು ವೈದ್ಯಕೀಯ ಸಮಾಜ ಕಾರ್ಯ ಕಲಿಕಾ ವಿದ್ಯಾರ್ಥಿಗಳಿಂದ ಆರೋಗ್ಯ ಜಾಗ್ರತಿ ಫಲಕಗಳೊಂದಿಗೆ ಜಾಥಾವನ್ನು ನಡೆಸಲಾಯಿತು. ಆಸ್ಪತ್ರೆ ಆಡಳಿತ ವಿಭಾಗದ ಡಾ.ಸುನಿತಾ ಸಲ್ಡಾನ ಮತ್ತು ವೈದ್ಯಕೀಯ ಸಮಾಜ ಕಾರ್ಯ ಡಾ ಮೊಹಮ್ಮದ್ ಗುತ್ತಿಗಾರ್, ದಾದಿಯರ ಮುಖ್ಯ ಅಧಿಕಾರಿ ಸಿಸ್ಟರ್ ಐಲಿನ್ ಮತ್ತು ಆಸ್ಪತ್ರೆಯ ಅಧೀಕ್ಷಕರಾದ ಪ್ರವೀಣ್ ಕುಮಾರ್, ಮಾರ್ಕೆಟಿಂಗ್ ವಿಭಾಗದ ವಿಜಯಾನಂದ ಶೆಟ್ಟಿ ಹಾಗೂ ವೈದ್ಯಕೀಯ ಸಮಾಜ ಕಾರ್ಯ ವಿಭಾಗದ ಅಬ್ದುಲ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *