Header Ads
Header Ads
Breaking News

ಯೋಧರು ನಡೆಸಿದ ಹೋರಾಟವನ್ನು ರಾಜಕೀಯಕ್ಕೆ ಬಳಸುವುದು ಸರಿಯಲ್ಲ :ಯು.ಟಿ. ಖಾದರ್

 ನಮ್ಮ ದೇಶದ ಗಡಿಪ್ರದೇಶದಲ್ಲಿ ನಮ್ಮ ದೇಶದ ಯೋಧರು ನಡೆಸಿದ ಹೋರಾಟ-ಜೀವ ತ್ಯಾಗವನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ. ಇದು ಅತ್ಯಂತ ದುರದೃಷ್ಟಕರ ವಿಚಾರವಾಗಿದ್ದು, ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಹೇಳಿದರು.

ಪುತ್ತೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ‘ಪಾಕಿಸ್ತಾನದಲ್ಲಿರುವ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಯೋಧರು ನಡೆಸಿದ ದಾಳಿಯಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ನಮ್ಮ ದೇಶದ ಗಡಿಭಾಗದಲ್ಲಿ ನಮ್ಮ ವೀರ ಯೋಧರು ಹೋರಾಟ ನಡೆಸಿದ ಹಾಗೂ ಜೀವ ತ್ಯಾಗ ಮಾಡಿದ ಸಂದರ್ಭದಲ್ಲಿ ಇಡೀ ದೇಶದ ಜನತೆ ಅವರ ಪರವಾಗಿ ಮತ್ತು ಯೋಧರ ಕುಟುಂಬದ ಪರವಾಗಿ ಇರಬೇಕು. ಆದರೆ ಈ ಸಂದರ್ಭದಲ್ಲಿ ಇದನ್ನೇ ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ ಮತ್ತಿತರರು ಇದ್ದರು.

Related posts

Leave a Reply

Your email address will not be published. Required fields are marked *