Header Ads
Header Ads
Breaking News

ಯೋಧರ ಹತ್ಯೆಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪ

ಕಾಶ್ಮೀರದ ಪುಲ್ವಾಮದಲ್ಲಿ ನಡೆದಿರುವ ಯೋಧರ ಹತ್ಯೆಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ. ಈ ಕುರಿತು ಮಂಗಳೂರಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಲ್ವಾಮದಲ್ಲಿ ನಡೆದ ಯೋಧರ ಸಾವು ಹೇಯ ಕೃತ್ಯವಾಗಿದೆ. ಕೇಂದ್ರ ಸರ್ಕಾರದ ಇಂಟೆಲಿಜೆನ್ಸ್ ವೈಫಲ್ಯ ಆಗಿದ್ದರಿಂದ ಯೋಧರು ಸಾವು ಕಂಡಿದ್ದಾರೆ, ಕೇಂದ್ರ ಸರ್ಕಾರ ವೈಫಲದಿಂದಾಗಿ ಅಮಾಯಕ ಯೋಧರು ಸಾವನ್ನಪ್ಪಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಅಧಿಕಾರ ನಡೆಸಲು ಯಾವುದೇ ನೈತಿಕತೆ ಇಲ್ಲ. ದೇಶ ಪ್ರೇಮದ ನಾಟಕವಾಡುವ ಬಿಜೆಪಿಗೆ ಮತ ಕೇಳುವ ಹಕ್ಕಿಲ್ಲ, ಪ್ರದಾನಿ ನರೇಂದ್ರ ಮೋದಿ ಸುಳ್ಳಿನಿಂದ ದೇಶಕಟ್ಟಲು ಹೊರಟ್ಟಿದ್ದಾರೆ. ಪ್ರಚಾರಕ್ಕಾಗಿ5 ಸಾವಿರ ಕೋಟಿ ಖರ್ಚು ಮಾಡುತ್ತಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತ ವ್ಯಯವಾಗುತ್ತಿದೆ ಎಂದು ಅವರು ಆರೋಪಿಸಿದರು.

Related posts

Leave a Reply

Your email address will not be published. Required fields are marked *