Header Ads
Header Ads
Breaking News

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಶಿವಭಾಗ್ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿ ಕಾವ್ಯ ನಟರಾಜ್ ಆಳ್ವ ಸ್ಪರ್ಧೆ

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ ಪಕ್ಷ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.ಇನ್ನು 34ನೇ ಶಿವಭಾಗ್ ವಾರ್ಡ್ ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕಾವ್ಯ ನಟರಾಜ್ ಆಳ್ವ ಸ್ಪರ್ಧಾ ಕಣದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಕಾವ್ಯ ನಟರಾಜ್ ಆಳ್ವ ಪರ ಶಾಸಕ ವೇದವ್ಯಾಸ್ ಕಾಮತ್ ಪ್ರಚಾರ ನಡೆಸಿದ್ರು. ಕಾರ್ಯಕರ್ತರ ಜೊತೆಗೂಡಿ ತೆರಳಿ ಶಿವಭಾಗ್ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿದ್ರು. ಮನೆ ಮನೆಗೆ ತೆರಳಿ ಮತದಾರರ ಮನವೊಲಿಸುವ ಪ್ರಯತ್ನ ನಡೆಸಿದ್ರು. ವಿ4 ನ್ಯೂಸ್ ಜೊತೆಗೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಈ ಬಾರಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ನ ಆಡಳಿತ ವೈಖರಿ ವಿರುದ್ಧ ಬಿಜೆಪಿ ಅಭ್ಯರ್ಥಿಗಳನ್ನ ಬೆಂಬಲಿಸುವ ವಿಶ್ವಾಸವಿದೆ ಅಂತಾ ಹೇಳಿದ್ರು. ಇದೇ ವೇಳೆ ಮಾತನಾಡಿದ ಅಭ್ಯರ್ಥಿ ಕಾವ್ಯ ನಟರಾಜ್ ಆಳ್ವ, ಈ ಬಾರಿ ಶಿವಭಾಗ್ ವಾರ್ಡ್‌ನಿಂದ ವಿಜಯಶಾಲಿಯಾದ್ರೆ, ವಾರ್ಡ್‌ನ ಸಮಗ್ರ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡುತ್ತೇನೆ ಅಂತಾ ಹೇಳಿದ್ರು.

Related posts

Leave a Reply

Your email address will not be published. Required fields are marked *