Header Ads
Breaking News

ರಜೆಯ ಮಜಾ ಕಳೆದು ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

ಈವರೆಗೆ ರಜೆಯ ಮಜಾ ಅನುಭವಿಸುತ್ತಿದ್ದ ಮಕ್ಕಳು ಇದೀಗ ಮತ್ತೆ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಮಕ್ಕಳಿಗೆ ಬೇಸಿಗೆ ರಜಾ ಮಜಾ ಕಳೆದು 2019 -20ನೇ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢಶಾಲಾ ತರಗತಿಗಳು ಇಂದಿನಿಂದ ರಾಜ್ಯಾದ್ಯಂತ ಆರಂಭಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಹಾಗೂ ಬಹುತೇಕ ಖಾಸಗಿ ಶಾಲೆಗಳು ಕೂಡ ಆರಂಭಗೊಂಡಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರದಲ್ಲಿ ಇಂದು ಪ್ರಾರಂಭೋತ್ಸವ ಸಂಭ್ರಮದಿಂದ ನಡೆಯಿತು. 

ಅಂಗವಾಗಿ ವಿದ್ಯಾರ್ಥಿಗಳು ಖುಷಿಯಿಂದಲೇ ಶಾಲೆಗೆ ಆಗಮಿಸಿದರು. ವಿದ್ಯಾರ್ಥಿಗಳನ್ನು ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯ್ತು. ಈ ಸಂದರ್ಭ ಶಿಕ್ಷಕರು ಕೂಡ ವಿದ್ಯಾರ್ಥಿಗಳಿಗೆ ಸಾಥ್ ನೀಡಿದ್ರು.

Related posts

Leave a Reply

Your email address will not be published. Required fields are marked *