Header Ads
Header Ads
Breaking News

ರಸ್ತೆಯಲ್ಲೇ ನಿಂತು ಮೀನು ಮಾರಾಟ : ವಿಟ್ಲ ಪಟ್ಟಣ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯರ ದೂರು

ವಿಟ್ಲ: ಬೊಬ್ಬೆಕೇರಿ ಕಟ್ಟೆಯಿಂದ ದೇವಸ್ಥಾನಕ್ಕೆ ತೆರಳುವ ಮಾರ್ಗದ ಬದಿಯಲ್ಲಿ ಮೀನು ಮಾರುಕಟ್ಟೆ ಕಟ್ಟಡ ನಿರ್ಮಾಣವಾಗಲಿಲ್ಲ. ರಸ್ತೆಯಲ್ಲೇ ವಾಹನಗಳು ನಿಂತು ಮೀನು ಮಾರಾಟ ಮಾಡಲಾಗುತ್ತಿದೆ. ವಾಹನ ಚಾಲಕರಿಗೆ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ. ಮೀನು ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸಂತೆ ನಡೆಯುವ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಿಟ್ಲ ಪಟ್ಟಣ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯರು ದೂರಿದರು. 

ಅವರು ಗುರುವಾರ ನಡೆದ ವಿಟ್ಲ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆರೋಪಿಸಿದರು. ಸಂತೆ ಮಾರುಕಟ್ಟೆ ಬಳಿ ಇರುವ ಮೀನು ಮಾರುಕಟ್ಟೆಗೆ ಯಾರೂ ತೆರಳುತ್ತಿಲ್ಲ, ಅಲ್ಲಿ ವ್ಯಾಪಾರ ನಡೆಸುತ್ತಿಲ್ಲ ಎಂಬ ಬಿಜೆಪಿ ಸದಸ್ಯರ ಅಭಿಪ್ರಾಯಕ್ಕೆ ವಿರೋಧ ವ್ಯಕ್ತವಾಯಿತು. ಕಾಂಗ್ರೆಸ್ ಸದಸ್ಯರು ನಾಗರಿಕರೇ ರಸ್ತೆಯಲ್ಲಿ ನಿಲ್ಲುತ್ತಾರೆ. ಮೀನುಗಾರರಿಗೆ ಯಾವುದೇ ತೊಂದರೆಯಾಗಬಾರದು ಎಂದರು. ಈ ನಡುವೆ ಎರಡೂ ಪಕ್ಷದ ಸದಸ್ಯರ ನಡುವೆ ಭಾರೀ ಮಾತಿನ ಚಕಮಕಿ ನಡೆಯಿತು. ಗೊಂದಲದ ವಾತಾವರಣದಲ್ಲಿ ಯಾರಿಗೆ ಯಾರು ಏನು ಹೇಳುತ್ತಿದ್ದಾರೆಂದೇ ಅರ್ಥವಾಗಲಿಲ್ಲ. ಬಳಿಕ ಗೊಂದಲ ಸಣ್ಣಗಾಯಿತು.
ಮನೆ ಹಾಗೂ ಹೊಸ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ಸಿಗುತ್ತಿಲ್ಲ. ಮೂಡಾದ ಅನುಮತಿಯನ್ನು ಪಡೆಯಲು ನಾಗರಿಕರು ಸುತ್ತಾಡುತ್ತಿದ್ದಾರೆ. ಆದರೆ ಯಾವುದೇ ಪ್ರಯೋಜವಿಲ್ಲ. ಈ ನಡುವೆ ಸಾಮಾನ್ಯ ಸಭೆಯಲ್ಲಿ ತೆರಿಗೆ ಪರಿಷ್ಕರಣೆ ಮಾಡಬೇಕು ಎನ್ನುವ ಸುತ್ತೋಲೆ ಬಂದಿದೆ. ಮನೆ, ಹಾಗೂ ಕಟ್ಟಡಕ್ಕೆ ಪರವಾನಿಗೆ ನೀಡಲಾಗುವುದಿಲ್ಲವೆಂದಾದಲ್ಲಿ ತೆರಿಗೆ ಪರಿಷ್ಕರಣೆಗೆ ಆತುರವೇನು ಎಂದು ವಿಟ್ಲ ಪ.ಪಂ.ಸದಸ್ಯರು ಒಕ್ಕೊರಲಿನಿಂದ ಪ್ರಶ್ನಿಸಿದರು.
ಅಧ್ಯಕ್ಷೆ ದಮಯಂತಿ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಮಾಜಿ ಅಧ್ಯಕ್ಷ ಅರುಣ್ ಎಂ.ವಿಟ್ಲ, ಪ.ಪಂ.ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ರಾಮದಾಸ ಶೆಣೈ, ರವಿಪ್ರಕಾಶ್, ಮಂಜುನಾಥ ಕಲ್ಲಕಟ್ಟ, ಲೋಕನಾಥ ಶೆಟ್ಟಿ ಕೊಲ್ಯ, ಚಂದ್ರಕಾಂತಿ ಶೆಟ್ಟಿ, ಅಬ್ದುಲ್‌ರಹಿಮಾನ್ ನೆಲ್ಲಿಗುಡ್ಡೆ, ಸುನಿತಾ ಕೋಟ್ಯಾನ್, ಗೀತಾ ಪುರಂದರ, ಲತಾ ಅಶೋಕ್, ಸಂಧ್ಯಾ ಮೋಹನ್, ಇಂದಿರಾ ಅಡ್ಡಾಳಿ, ಅಬ್ಬೋಕರೆ ವಿ., ಎಂಜಿನಿಯರ್ ಶ್ರೀಧರ್, ರತ್ನಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *