Header Ads
Header Ads
Breaking News

ರಾಜ್ಯಕ್ಕೆ ಪ್ರತ್ಯೇಕ ಧ್ವಜದ ವಿನ್ಯಾಸ -9 ಸದಸ್ಯರನ್ನೊಳಗೊಂಡ ಸಮಿತಿ ರಚನೆ – ಸಿ‌ಎಂ ಸಿದ್ದರಾಮಯ್ಯರಿಂದ ಸಮಿತಿ ರಚನೆಗೆ ಆದೇಶ

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಪ್ರತ್ಯೇಕ ಧ್ವಜದ ವಿನ್ಯಾಸ ರಚಿಸಲು 9 ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದೆ.
ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ದೇಶದ ಯಾವುದೇ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿಲ್ಲ. ಇದೀಗ ಕರ್ನಾಟಕ ಪ್ರತ್ಯೇಕ ಧ್ವಜ ಹೊಂದಲು ಮುಂದಾಗಿದೆ.
ಈ ಸಂಬಂಧ ಜೂನ್ 6 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಈ ಸಮಿತಿಯಲ್ಲಿ ಹಿರಿಯ ಸಾಹಿತಿಗಳು ಹಾಗೂ ಚಿಂತಕರು ಸದಸ್ಯರಾಗಿರಲಿದ್ದಾರೆ. ಈ ಸಮಿತಿಯು ಅಧ್ಯಯನ ನಡೆಸಿ ಹಾಲಿ ಇರುವ ಧ್ವಜವನ್ನೇ ಅಂಗೀಕರಿಸಬೇಕೆ, ಇಲ್ಲವೇ ಹೊಸದೊಂದು ಧ್ವಜವನ್ನು ಮಾನ್ಯ ಮಾಡಬೇಕೆ ಎಂಬುದರ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಲಿದೆ.

Related posts

Leave a Reply