Header Ads
Breaking News

ರಾಜ್ಯದಲ್ಲಿ ಇಂದಿನಿಂದ ವೀಕೆಂಡ್ ಲಾಕ್‍ಡೌನ್ ಜಾರಿ- ಮನೆಯಿಂದ ಹೊರಬಂದ್ರೆ ಕೇಸ್ ಗ್ಯಾರಂಟಿ

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದಲೇ ವೀಕೆಂಡ್ ಲಾಕ್ ಡೌನ್ ಜಾರಿಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ 33 ಗಂಟೆಗಳ ಕಾಲ ಕರ್ನಾಟಕ ಬಂದ್ ಆಗಲಿದೆ. ಅನಗತ್ಯವಾಗಿ ಮನೆಯಿಂದ ಹೊರಬಂದ್ರೆ ಕೇಸ್ ಬೀಳುವುದು ಗ್ಯಾರಂಟಿ.

ರಾಜ್ಯ ಸರಕಾರ ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ನೈಟ್ ಕರ್ಪ್ಯೂ ಜಾರಿ ಮಾಡಿದೆ. ಅಲ್ಲದೇ ಇಂದಿನಿಂದ ವೀಕೆಂಡ್ ಲಾಕ್‍ಡೌನ್ ಕೂಡ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯ ವರೆಗೆ ಕರ್ನಾಟಕ ಬಂದ್ ಆಗಲಿದೆ. ಮೆಡಿಕಲ್, ಆಸ್ಪತ್ರೆ ಸೇರಿ ಅಗತ್ಯ ಸೇವೆಗಳು ಮಾತ್ರವೇ ಲಭ್ಯವಾಗಲಿದೆ. ಬಸ್, ಆಟೋ, ಟ್ಯಾಕ್ಸಿಗಳು ರಸ್ತೆಗೆ ಇಳಿಯುವುದಿಲ್ಲ. ಲಾಕ್ ಡೌನ್ ವೇಳೆಯಲ್ಲಿ ಯಾರು ಕೂಡ ಅನಗತ್ಯವಾಗಿ ಮನೆಯಿಂದ ಹೊರ ಬರದಂತೆ ರಾಜ್ಯ ಸರಕಾರ ಸೂಚನೆಯನ್ನು ನೀಡಿದೆ.

Related posts

Leave a Reply

Your email address will not be published. Required fields are marked *