Header Ads
Header Ads
Breaking News

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಮಾ.12 ರಂದು ವಿ.ಹಿಂ.ಪ, ಬಜರಂಗದಳದಿಂದ ಪ್ರತಿಭಟನೆ

ಮೂಡುಬಿದಿರೆ: ಮುಸಲ್ಮಾನರ ಓಲೈಕೆಗಾಗಿ ತುಷ್ಠೀಕರಣದ ರಾಜಕಾರಣವನ್ನು ನಡೆಸುತ್ತಿರುವ ಸಿದ್ದರಾಮಯ್ಯ ಸರಕಾರ ಹಿಂದೂಗಳನ್ನು ಹತ್ತಿಕ್ಕಲು ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಬಜರಂಗದಳ ಕರ್ನಾಟಕ ಪ್ರಾಂತ ಸಂಚಾಲಕ ಸಂಚಾಲಕ ಸುನಿಲ್ ಕೆ.ಆರ್ ಆರೋಪಿಸಿದ್ದಾರೆ.

ಅವರು ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಗೋಹತ್ಯೆ ನಿಷೇಧ ಕಾನೂನು ರದ್ದುಪಡಿಸಿರುವುದು ಮತ್ತು ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ಮೇಲಿದ್ದ ಕ್ರಿಮಿನಲ್ ಕೇಸುಗಳನ್ನು ವಾಪಾಸು ಪಡಕೊಂಡಿದ್ದರ ಪರಿಣಾಮ ರಾಜ್ಯದಲ್ಲಿ ಹಿಂಸೆಗಳು ಹೆಚ್ಚಳಕ್ಕೆ ಕಾರಣವಾಯಿತು. ರಾಷ್ಟ್ರೀಯ ಚಿಂತನೆಯ ಸುಮಾರು 23 ಹಿಂದೂ ಕಾರ್‍ಯಕರ್ತರ ಹತ್ಯೆಯಾಯಿತು ಎಂದ ಅವರು, ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ದರೆಗುಡ್ಡೆಯ ಸಮಿತ್‌ರಾಜ್ ವಿರುದ್ಧ ರಾಜಕೀಯ ಪ್ರೇರಿತ ಗೂಂಡಾ ಕಾಯ್ದೆ ದಾಖಲಿಸಿ ಬಂಧಿಸಲಾಗಿದೆ. ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದರು ಅವರ ವಿರುದ್ಧ ಗೂಂಡಾ ಕಾಯ್ದೆ ಇಲ್ಲ. ಸರಕಾರದ ಇಬ್ಬಗೆ ನೀತಿಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಿದೆ. ಸಮಿತ್‌ರಾಜ್ ವಿರುದ್ಧ ದಾಖಲಾದ ಗೂಂಡಾ ಕಾಯ್ದೆಯನ್ನು ಸರಕಾರ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಸೋಮವಾರ ಬಸ್‌ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಬಜರಂಗಳ ದಳ ವಿಭಾಗ ಸಂಚಾಲಕ ಭುಜಂಗ ಕುಲಾಲ್, ತಾಲ್ಲೂಕು ಸಂಚಾಲಕ ಸೋಮನಾಥ್ ಕೋಟ್ಯಾನ್, ಪ್ರಮುಖರಾದ ಸುಚೇತನಾ ಜೈನ್, ಶರತ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ವರದಿ: ಪ್ರೇಮಶ್ರೀ ಮೂಡಬಿದರೆ

Related posts

Leave a Reply