Header Ads
Breaking News

ರಾಜ್ಯದಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿಗೆ ನಿಗಮ ರಚನೆ ಮಾಡಿ – ಮಂಗಳೂರಿನಲ್ಲಿ ಐವನ್ ಡಿಸೋಜಾ ಒತ್ತಾಯ

ಮಂಗಳೂರು : ರಾಜ್ಯದಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ರಚನೆ ಮಾಡುವ ನಿರ್ಧಾರವನ್ನು ತಕ್ಷಣ ಪುನರ್ ಪರಿಶೀಲಿಸಿ ಕಾರ್ಯಗತಗೊಳಿಸಬೇಕು ಎಂದು ಕೆಪಿಸಿಸಿ ವಕ್ತಾರ ಐವನ್ ಡಿ ಸೋಜ ತಿಳಿಸಿದ್ದಾರೆ.

ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯದ 27 ಜಿಲ್ಲೆಗಳಲ್ಲಿ ಸುಮಾರು 30ಲಕ್ಷ ಜನಸಂಖ್ಯೆ ಇದೆ. ಈ ಪೈಕಿ ಸಾಕಷ್ಟು ಜನರು ಕಾರ್ಮಿಕರು, ಕೂಲಿಕಾರರು ಬಡವರಿದ್ದಾರೆ. ಅವರ ಅಭಿವೃದ್ಧಿಗಾಗಿ ಈ ಹಿಂದೆ ಮಾಡಿರುವ ತೀರ್ಮಾನವನ್ನು ಯಾವುದೇ ಕಾರಣ ನೀಡದೆ ರದ್ದು ಮಾಡಲಾಗಿದೆ.ಈ ನಿಗಮದ ಸ್ಥಾಪನೆಗೆ ನಿಗದಿಯಾದ ಹಣವನ್ನು ಬಿಡುಗಡೆ ಮಾಡದೆ ರಾಜ್ಯದ ಸರಕಾರ ಕ್ರೈಸ್ತ ಸಮುದಾಯಕ್ಕೆ ಅನ್ಯಾಯ ಎಸಗಿದೆ ಎಂದರು. ಇನ್ನು ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ವಿನಿಯೋಗಿಸುವ ತೀರ್ಮಾನವನ್ನು ಅನುಷ್ಠಾನ ಮಾಡುವುದು ಸರಕಾರದ ಹೊಣೆಗಾರಿಕೆ. ಆದರೆ ಈ ನಡುವೆ ರಾಜಕೀಯ ಉದ್ದೇಶದಿಂದ ಕ್ರಿಶ್ಚಿಯನ್ ನಿಗಮವನ್ನು ಬಿಟ್ಟು ಕೆಲವು ನಿಗಮ ಮಾಡಲು ಹೊರಡಿದ್ದಾರೆ. ಮರಾಠ ಸಮುದಾಯ, ವೀರಶೈವ ಲಿಂಗಾಯತ ಸಮುದಾಯ ಕ್ಕೆ ನಿಗಮ ಮಾಡಲು ಹೊರಟಿದ್ದಾರೆ. ಕ್ರೈಸ್ತ ಸಮುದಾಯಕ್ಕೆ ಸರಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಹೋರಾಟ ನಡೆಸಲಾಗುವುದು ಐವನ್ ಡಿ ಸೋಜ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಎ.ಸಿ. ಜಯರಾಜ್, ಲ್ಯಾನ್ಸಿ ಎಲ್ ಪಿಂಟೋ, ನವೀನ್ ಡಿ ಸೋಜ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *