Header Ads
Breaking News

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ : ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಗುರುವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ, ಗರಿಷ್ಠ 3.2 ಮೀಟರ್‍ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ ಹೀಗಾಗಿ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡಿಗೆ ಹೊಂದಿಕೊಂಡಿರುವ ಕರಾವಳಿ ಭಾಗದ ಬಂಗಾಳಕೊಲ್ಲಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಮುಂದಿನ ಮೂರು ದಿನ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Related posts

Leave a Reply

Your email address will not be published. Required fields are marked *