Header Ads
Breaking News

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಮತದಾನ : ಪುತ್ತೂರಿನಲ್ಲಿ ಒಟ್ಟು 220 ಮತಗಟ್ಟೆಗಳ ಸ್ಥಾಪನೆ

ರಾಜ್ಯದಲ್ಲಿ ನಾಳೆ ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಸಿಬ್ಬಂದಿಗಳು ಈಗಾಗಲೇ ಸಿದ್ಧವಾಗಿದ್ದಾರೆ. ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರಕ್ಕೂ ನಾಳೆ ಮತದಾನ ನಡೆಯಲಿದೆ. ಪುತ್ತೂರು ತಾಲೂಕಿನಲ್ಲಿ ಒಟ್ಟು 220 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಗೆ 5 ಸಿಬ್ಬಂದಿಗಳಂತೆ ಒಟ್ಟು 1048 ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಅಷ್ಟೇ ಪ್ರಮಾಣದ ಸಿಬ್ಬಂದಿಗಳನ್ನೂ ಪ್ರತೀ ಮತಗಟ್ಟೆಗೆ ನೇಮಿಸಲಾಗಿದೆ.

ತಾಲೂಕಿನಲ್ಲಿ ಒಟ್ಟು 53 ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆಗಳಿದ್ದು, ಈ ಮತಗಟ್ಟೆಗೆ ಮೈಕ್ರೋ ಅಬ್ಸರ್ವರ್ ನೇಮಿಸಲಾಗಿದೆ. ಬೆಳಿಗ್ಗೆ 6 ಗಂಟೆಗೆ ಎಲ್ಲಾ ಮತಗಟ್ಟೆಗಳಲ್ಲಿ ಅಣಕು ಮತದಾನ ಪ್ರಕ್ರಿಯೆ ನಡೆಯಲಿದ್ದು, ಈ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಚುನಾವಣಾ ಏಜೆಂಟರ್ ಸರಿಯಾದ ಸಮಯಕ್ಕೆ ಹಾಜರಿರಲು ಚುನಾವಣಾ ಅಧಿಕಾರಿಗಳಿಂದ ಸೂಚನೆ ನೀಡಲಾಗಿದೆ. 7 ಗಂಟೆಗೆ ಸರಿಯಾಗಿ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಮತಯಂತ್ರದಲ್ಲಿ ತಾಂತ್ರಿಕ ದೋಷಗಳು ಕಂಡು ಬಂದಲ್ಲಿ ಸಾರ್ವಜನಿಕರು ಗಾಬರಿಗೊಳ್ಳದೆ ಅಧಿಕಾರಿಗಳೊಂದಿಗೆ ಸಹಕರಿಸಲೂ ಕೋರಲಾಗಿದೆ. ತಾಂತ್ರಿಕ ದೋಷ ಇರುವ ಮತಯಂತ್ರಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸುವ ವ್ಯವಸ್ಥೆಯೂ ಇದ್ದು, ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದ ಪ್ರತಿಯೊಬ್ಬ ಮತದಾರನಿಗೂ ಮತ ಚಲಾಯಿಸುವ ಅವಕಾಶವನ್ನು ನೀಡಲಾಗಿದೆ.

Related posts

Leave a Reply

Your email address will not be published. Required fields are marked *