Header Ads
Header Ads
Breaking News

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ 100 ದಿನ. ಉಡುಪಿಯಲ್ಲಿ ಜೆಡಿಎಸ್‌ನಿಂದ ಸಿಹಿ ತಿಂಡಿ ಹಂಚಿ ಸಂಭ್ರಮ

 ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಯಶಸ್ವಿಯಾಗಿ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಸಿಹಿ ತಿಂಡಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.ಜಿಲ್ಲಾಧ್ಯಕ್ಷರಾದ ಯೋಗೀಶ್.ವಿ.ಶೆಟ್ಟಿಯವರು ಮಾತನಾಡಿ ಕುಮಾರಸ್ವಾಮಿಯವರು ೫ ವರ್ಷ ಪೂರೈಸುವಂತೆ ಹಾರೈಸಿದರು.ಸಮ್ಮಿಶ್ರ ಸರಕಾರ ಉತ್ತಮ ಕೆಲಸ ಮಾಡುತ್ತಿದೆ. ಮೂರೇ ತಿಂಗಳಲ್ಲಿ ರೈತರ ಸಾಲಮನ್ನಾ ಸಹಿತ ಅನೇಕ ಜನಪರ ಯೋಜನೆಗಳನ್ನು ಮುಖ್ಯಮಂತ್ರಿಗಳು ಜಾರಿಗೆ ತಂದಿದ್ದಾರೆ.ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಯೋಜಗಳು ತಲುಪುವಂತಾಗಲು ಕುಮಾರಸ್ವಾಮಿಯವರು ಐದು ವರ್ಷ ಆಡಳಿತ ನಡೆಸಬೇಕು ಎಂದು ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಈ ಸಂದರ್ಭ ಹೇಳಿದರು.

Related posts

Leave a Reply