Breaking News

ರಾಜ್ಯದ ಅಭಿವೃದ್ಧಿಗೆ ಸರ್ಕಾರದ ಸವಲತ್ತು ಫಲಾನುಭವಿಗಳಿಗೆ ತಲುಪಿಸಿ, ಉಳ್ಳಾಲದಲ್ಲಿ ಸಚಿವ ಯು. ಟಿ. ಖಾದರ್ ಹೇಳಿಕೆ


ಸರಕಾರದ ಸವಲತ್ತು ಫಲಾನುಭವಿಗೆ ತಲುಪಿ ಅವರು ಅಭಿವೃದ್ಧಿಯಾದರೆ ಗ್ರಾಮ ಅಭಿವೃದ್ಧಿಯೊಂದಿಗೆ ರಾಜ್ಯದ ಅಭಿವೃದ್ಧಿ ಸಾಧ್ಯವಿದ್ದು ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸ್ಥಳಿಯಾಡಳಿತ ಸಂಸ್ಥೆಯ ಅಧಿಕಾರಿಗಳು ಗ್ರಾಮದ ಕಟ್ಟಕಡೆಯ ಪ್ರಜೆಗೆ ಸವಲತ್ತು ಸಿಗುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು. ಟಿ. ಖಾದರ್ ತಿಳಿಸಿದರು.
ತೊಕ್ಕೊಟ್ಟು ಕಲ್ಲಾಪುವಿನ ಖಾಸಗಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು.
ಸರಕಾರ ಬಡವರಿಗೆ ಪೂರಕವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಕಳೆದ ನಾಲ್ಕು ವರ್ಷಗಳಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಬರದ ರೀತಿಯಲ್ಲಿ ಕಾರ್ಯ ನಿರ್ವಹಿಸಿದೆ. ಸರಕಾರದ ಸವಲತ್ತು ಪಡೆಯಬೇಕಾದರೆ ಆಧಾರ್ ಕಾರ್ಡ್ ಅತೀ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಕ್ಷೇತ್ರದ ಐದು ಪ್ರದೇಶಗಳಾದ ಗ್ರಾಮ ಚಾವಡಿ, ನಾಟೆಕಲ್, ತೊಕ್ಕೊಟ್ಟು, ಕೊಟೆಕಾರ್, ಉಳ್ಳಾಲದಲ್ಲಿ ಆಧಾರ್ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು ಇದರ ಸದುಪಯೋಗವನ್ನು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆಯಡಿ ೧೮೬ ಫಲಾನುಭವಿಗಳಿಗೆ ೩೭,೬೦,೦೦೦ ಹಾಗೂ ಅಂತ್ಯ ಸಂಸ್ಕಾರ ಸಹಾಯಧನವಾಗಿ ೧೦೦ ಫಲಾನುಭವಿಗಳಿಗೆ ೨,೨೨,೦೦೦ ಮೊತ್ತದ ಚೆಕ್ ವಿತರಿಸಲಾಯಿತು. ಜನಸಂಪರ್ಕ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ರಶೀದಾ ಬಾನು, ತಾಲೂಕು ಪಂಚಾಯತ್ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ, ಸುರೇಖ ಚಂದ್ರಹಾಸ್, ಪದ್ಮಾವತಿ ಪೂಜಾರಿ, ಶಶಿಪ್ರಭಾ ಶೆಟ್ಟಿ, ವಿಲ್ಮಾ ವಿಲೆಫ್ರೆಡ್, ಉಳ್ಳಾಲ ನಗರಸಭಾಧ್ಯಕ್ಷ ಹುಸೈನ್ ಕುಂಞಿಮೋನು, ಉಪಾಧ್ಯಕ್ಷೆ ಚಿತ್ರಕಲಾ, ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply