Header Ads
Header Ads
Breaking News

“ರಾಜ್ಯದ ಎಲ್ಲಾ ಕ್ಷೇತ್ರ ಬಿಜೆಪಿ ತೆಕ್ಕೆಗೆ” ಪುತ್ತೂರಿನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿಕೆ.

ರಾಜ್ಯದ ಎಲ್ಲಾ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದರು.ಪುತ್ತೂರಿನಲ್ಲಿ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನ ಮಾಡಿದ ಅವರು ರಾಜ್ಯದ ವಿದ್ಯಾವಂತರು ಬಿಜೆಪಿ ಪಕ್ಷದ ಜೊತೆಗಿದ್ದು, ಈ ಬಾರಿ ಬಿಜೆಪಿ ಪರ ಒಲವು ಇನ್ನಷ್ಟು ಹೆಚ್ಚಿದೆ ಎಂದರು. ಒಂದು ಕಾಲದಲ್ಲಿ ವಿಧಾನಸಭೆಯಲ್ಲಿ ಒಂದು ಸ್ಥಾನವನ್ನೂ ಪಡೆಯದಿದ್ದ ಸಂದರ್ಭದಲ್ಲಿ ಬಿಜೆಪಿ ವಿಧಾನಪರಿಷತ್ ಗೆ ಶಾಸಕರನ್ನು ಕಳುಹಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿಎಸ್-ಕಾಂಗ್ರೇಸ್ ಸರಕಾರ ಸದ್ಯದಲ್ಲೇ ಪತನವಾಗಲಿದೆ ಎಂದು ಭವಿಷ್ಯ ನುಡಿದ ಅವರು ರಾಜ್ಯದ ಜನ ಎರಡೂ ಪಕ್ಷಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದರೂ, ಹಿಂಬಾಗಿಲಿನಿಂದ ಬಂದು ಅಧಿಕಾರ ನಡೆಸುತ್ತಿದ್ದಾರೆ. ಸಚಿವ ಸ್ಥಾನದ ಹಂಚಿಕೆ ವಿಚಾರವಾಗಿ ಇದೀಗ ಬೀದಿ ಬೀದಿ ಜಗಳವಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅವಮಾನ ಎಂದರು. ಸಚಿವ ಸ್ಥಾನದ ಹಂಚಿಕೆ ವಿಚಾರದಲ್ಲೇ ಗೊಂದಲದಲ್ಲಿರುವವರು ಇನ್ನು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿ ಚುನಾವಣೆ ಸ್ಪರ್ಧಿಸುವುದು ಸಾಧ್ಯವೇ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ವಿಧಾನಸಭಾ ಚುನಾವಣೆಗೆ ಮೊದಲು ಅಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಎಂದು ಹೇಳಿದವರು ಇದೀಗ ಮಕ್ಕಳಾಣೆ ಹಾಕಿ ಮುಖ್ಯಮಂತ್ರಿ ಮಾಡಿದ್ದಾರೋ ಎಂದು ಅವರು ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಕುಟುಕಿದರು  

Related posts

Leave a Reply