Header Ads
Breaking News

ರಾಜ್ಯದ ಜನತೆಗೆ ಗುಡ್ ನ್ಯೂಸ್

ಆಂಧ್ರ ಪ್ರದೇಶ ಹೊರತು ಪಡಿಸಿ, ರಾಜಸ್ತಾನ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೈಲ ಬೆಲೆ ಮೇಲಿನ ತೆರಿಗೆ ಇಳಿಸಲಾಗಿದೆ, ಈ ನಿಟ್ಟಿನಲ್ಲಿ ಕರ್ನಾಟಕ ಕೂಡ, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವ್ಯಾಟ್ ಇಳಿಸಲು ನಿರ್ಧರಿಸಿದ್ದು, ಇಂದು ಅಧಿಕೃತ ಆದೇಶ ಹೊರಬೀಳಲಿದೆ.ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟ ಜನತೆಗೆ ಸಿಎಂ ಕುಮಾರಸ್ವಾಮಿ ಶುಭಸುದ್ದಿ ನೀಡಲಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ೨ ರಿಂದ ೩ ರು.ನಷ್ಟು ಇಳಿಕೆಗೆ ಸಿಎಂ ಎಚ್ಡಿಕೆ ಸೂಚನೆ ನೀಡಿದ್ದಾರೆ. ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಸಿಎಂ ಕುಮಾರಸ್ವಾಮಿ ದರ ಇಳಿಸಲು ಸೂಚನೆ ನೀಡಿದ್ದಾರೆ. ಕಳೆದ ವಾರ ನಿಯೋಗದೊಂದಿಗೆ ದೆಹಲಿಗೆ ತೆರಳಿ ಪ್ರಧಾನಿ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಕುಮಾರ ಸ್ವಾಮಿ ತೈಲಬೆಲೆಗಳ ಮೇಲಿನ ತೆರಿಗೆ ಕಡಿಮೆ ಮಾಡಲು ಚರ್ಚಿಸಲಾಗುತ್ತದೆ ಎಂದು ಹೇಳಿದ್ದರು.

Related posts

Leave a Reply