Header Ads
Breaking News

ರಾಜ್ಯದ ಮೈತ್ರಿ ಸರ್ಕಾರ ಯಾವ ಕ್ಷಣವೂ ಪತನವಾಗಬಹುದು : ಪುತ್ತೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ

ರಾಜ್ಯದಲ್ಲಿರುವ ಮೈತ್ರಿ ಸರಕಾರ ಯಾವುದೇ ಕ್ಷಣದಲ್ಲಾದರೂ ಪತನವಾಗುವ ಸಾಧ್ಯತೆಯಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಜನತೆಯ ಸೇವೆ ಮಾಡುವುದು ಬಿಟ್ಟು ಪೂಜೆ ಮಾಡುವುದರಲ್ಲೇ ಮಗ್ನರಾಗಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಒಂದು ವರ್ಷಗಳಿಂದ ರಾಜ್ಯದಲ್ಲಿ ಮೈತ್ರಿ ಸರಕಾರ ಆಡಳಿತ ನಡೆಸುತ್ತಿದ್ದು, ಒಂದು ವರ್ಷದಲ್ಲೂ ಯಾವುದೇ ಕೆಲಸವನ್ನು ಮಾಡಿಲ್ಲ. ಮೈತ್ರಿ ಸರಕಾರದಿಂದ ಉತ್ತಮ ಆಡಳಿತದ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ನಿರಾಶೆಯಾಗಿದ್ದು, ಮುಖ್ಯಮಂತ್ರಿ ಅಭಿವೃದ್ಧಿ ಕಾರ್ಯಗಳನ್ನೇ ಮರೆತಿದ್ದಾರೆ ಎಂದು ಆರೋಪಿಸಿದ ಅವರು ಮುಖ್ಯಮಂತ್ರಿಗಳು ರಾಜ್ಯದ ಆಡಳಿತ ಮಾಡುವುದನ್ನು ಬಿಟ್ಟು ಎಲ್ಲಾ ದೇವಸ್ಥಾನಗಳಿಗೆ ಭೇಟಿ ಹಾಗೂ ಪೂಜೆಯಲ್ಲೇ ತೊಡಗಿಕೊಂಡಿದ್ದಾರೆ ಎಂದರು. ಮೈತ್ರಿ ಸರಕಾರದಲ್ಲೇ ಇದೀಗ ಗೊಂದಲವಿದ್ದು, ಯಾವುದೇ ಸಂದರ್ಭದಲ್ಲಿ ಸರಕಾರ ಪತನಗೊಳ್ಳುವ ಸಾಧ್ಯತೆಯೂ ಇದೆ ಎಂದ ಅವರು ಬಿಜೆಪಿ ಸರಕಾರವನ್ನು ಬೀಳಿಸುವ ಯಾವ ಪ್ರಯತ್ನವನ್ನೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾವತ್ತು ಕಾಂಗ್ರೇಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಮೈತ್ರಿ ಸರಕಾರದಿಂದ ಹೊರ ಬಂದು ರಾಜೀನಾಮೆ ನೀಡುತ್ತಾರೋ ಹಾಗೂ ಅವರೇ ಬಂದು ಬಿಜೆಪಿಯನ್ನು ಸೇರುತ್ತೇವೆ ಎಂದು ಇಚ್ಛೆ ವ್ಯಕ್ತಪಡಿಸಿದಲ್ಲಿ ಮಾತ್ರ ಬಿಜೆಪಿ ಆ ಇಚ್ಛೆಗೆ ಸ್ಪಂದಿಸಲಿದೆ ಎಂದರು

Related posts

Leave a Reply

Your email address will not be published. Required fields are marked *