Header Ads
Header Ads
Breaking News

ರಾಜ್ಯಮಟ್ಟದ ಪ್ರಾಥಮಿಕ ಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟ:ಆಳ್ವಾಸ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

ಮೂಡುಬಿದಿರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತುಮಕೂರು, ಉಪನಿರ್ದೇಶಕರ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ತುಮಕೂರು ಇವರ ವತಿಯಿಂದ ನವೆಂಬರ್ 03 ರಿಂದ 04ರವರೆಗೆ ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 14 ವಯೋಮಿತಿಯ ಪ್ರಾಥಮಿಕ ಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ಆಳ್ವಾಸ್ ಪ್ರಾಥಮಿಕ ಶಾಲೆ, ಮೂಡುಬಿದಿರೆ ವಿದ್ಯಾರ್ಥಿಗಳು ಒಟ್ಟು 11 ಚಿನ್ನ, 01 ಬೆಳ್ಳಿ ಹಾಗೂ 01 ಕಂಚಿನ ಪದಕಗಳನ್ನು ಪಡೆದು ಒಟ್ಟು 13 ಪದಕವನ್ನು ತನ್ನದಾಗಿಸಿಕೊಂಡು 1 ಹೊಸ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ.

ಬಾಲಕರ ವಿಭಾಗದಲ್ಲಿ ರಿಹಾನ್ ಸಿ.ಹೆಚ್.- 400ಮೀನಲ್ಲಿ ಕೂಟ ದಾಖಲೆ ನಿರ್ಮಿಸಿದ್ದಾರೆ. ಮತ್ತು ಈ ಕ್ರೀಡಾಕೂಟದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಯನ್ನು ಪಡೆದು ಆಳ್ವಾಸ್‍ಗೆ ಕೀರ್ತಿ ತಂದಿರುತ್ತಾರೆ. ಆಳ್ವಾಸ್ ಪ್ರಾಥಮಿಕ ಶಾಲೆಯಿಂದ 09 ಜನ ಕ್ರೀಡಾಪಟುಗಳು ಮುಂದಿನ ಡಿಸೆಂಬರ್‍ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕೂಲ್ ಗೇಮ್ಸ್ ಅತ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ನಮ್ಮ ಕರ್ನಾಟಕ ರಾಜ್ಯ ತಂಡದಲ್ಲಿ ಅತಿ ಹೆಚ್ಚು ಕ್ರೀಡಾಪಟುಗಳು ಆಳ್ವಾಸ್ ಪ್ರಾಥಮಿಕ ಶಾಲೆಯಿಂದ ಪ್ರತಿನಿಧಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

Related posts

Leave a Reply