Header Ads
Header Ads
Breaking News

ರಾಜ್ಯೋತ್ಸವ ಮತ್ತು ದೈಹಿಕ ಶಿಕ್ಷಣ-ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಮತ್ತು ಉತ್ತಮ ಜಿಲ್ಲಾ ದೈಹಿಕ ಶಿಕ್ಷಣ-ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವು ಮಣ್ಣಗುಡ್ಡೆಯ ಮಂಗಳಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಸಾರ್ವಜನಿಕರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಉತ್ತರ ವಲಯ, ದೈಹಿಕ ಶಿಕ್ಷಣ, ಶಿಕ್ಷಕರ ಸಂಘ ಹಾಗೂ ಮಂಗಳಾ ಆಂಗ್ಲ ಮಾಧ್ಯಮ ಶಾಲೆ ಮಣ್ಣಗುಡ್ಡೆ ಇವರ ವತಿಯಿಂದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ ಹಾಗೂ ಜಿಲ್ಲಾ ರಾಜ್ಯೋತ್ಸವ ಮತ್ತು ಉತ್ತಮ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು.
ಮಣ್ಣಗುಡ್ಡೆಯ ಮಂಗಳಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ. ದೇವರಾಜ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಕ್ಕಳ ಶಿಕ್ಷಣದ ಜೊತೆಗೆ ಶಿಕ್ಷಕರಿಗೆ ಬಹಳ ದೊಡ್ಡ ಜವಾಬ್ದಾರಿ ಇದೆ. ಇದರಲ್ಲಿ ದೈಹಿಕ ಶಿಕ್ಷಕ ಮತ್ತು ಶೈಕ್ಷಣಿಕ ಶಿಕ್ಷಣ ಶಿಕ್ಷಕರು ಎಂಬ ಬೇಧಬಾವ ಬೇಡ ಎಂದು ಹೇಳಿದರು.

ಇದೇ ವೇಳೆ ವಿದ್ಯಾದಾಯಿನಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಹೆಚ್. ನಾಯಕ್, ಸರಸ್ವತಿ ಮರ್ಕಂಜ, ಲಿಲ್ಲಿ ಪಾಯಸ್, ನಾಗೇಶ್ ಎ ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ. ಮೈಸೂರು ವಿಭಾಗ ಮತ್ತು ರಾಜ್ಯಮಟ್ಟದ ಕ್ರೀಡಾ ಕೂಟದ ಸಂಘಟನೆಯಲ್ಲಿ ಶ್ರಮಿಸಿದ್ ಸಂತೋಷ್, ನೋಯೆಲ್, ಜಯಶ್ರೀ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ.ಎಲ್. ಹರೀಶ್ ರೈ, ಉಮೇಶ್, ಹರಿಶ್ಚಂದ್ರ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply