Header Ads
Header Ads
Breaking News

ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ನಾಲ್ಕು ವರ್ಷ, ಮಂಗಳೂರಿನ ಪುರಭವನದಲ್ಲಿ ಜನಮನ ಕಾರ್ಯಕ್ರಮ


ಸಿದ್ದರಾಮಯ್ಯ ಮುಖಂಡತ್ವದ ರಾಜ್ಯ ಸರಕಾರವು ೪ ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಸಂಗಮ ಜನಮನ ಕಾರ್ಯಕ್ರಮ ಪುರಭವನದಲ್ಲಿ ನಡೆಯಿತು.
ದಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಡೆದ ಕಾರ್ಯಕರ್ಮಕ್ಕೆ ಸಚಿವ ರಮಾನಾಥ್ ರೈ ಚಾಲನೆ ನೀಡಿದರು. ಆ ವೇಳೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ ಅಂತಾ ಅವರು ಹೇಳಿದರು.
ಶಾಸಕ ಅಭಯಚಂದ್ರ ಜೈನ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ, ಮೇಯರ್ ಕವಿತಾ ಸನಿಲ್, ಉಪಮೇಯರ್ ರಜನೀಶ್, ಜಿಲ್ಲಾಧಿಕಾರಿ ಜಗದೀಶ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ನೇರವಾಗಿ ಸಂವಾದ ನಡೆಸಿದರು.

Related posts

Leave a Reply