Header Ads
Header Ads
Breaking News

ರಾಜ್ಯ ಮಟ್ಟದ ಕಾರ್ಯಗಾರ ಉದ್ಘಾಟನೆ : ಜಿಎಸ್‌ಟಿ ಕುರಿತ ರಾಜ್ಯ ಮಟ್ಟದ ಕಾರ್ಯಗಾರ

ಜಿಎಸ್‌ಟಿ ತೆರಿಗೆ ವ್ಯವಸ್ಥೆಯನ್ನು ದೆವ್ವದಂತೆ ಬಿಂಬಿಸಿ ಕೇಂದ್ರ ಸರ್ಕಾರದ ವಿರುದ್ಧ ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ. ಪ್ರತೀ ಒಂದು ಪೈಸೆಯ ಲೆಕ್ಕ ಇದೀಗ ಜನಸಾಮಾನ್ಯರಿಗೂ ಸಿಗುವಂತಾಗಿದ್ದರೆ ಅದು ಜಿಎಸ್‌ಟಿ ಇಂದು. ಇದರ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಬೇಕಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಹೇಳಿದ್ರು. ಅವರು ದ.ಕ ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಜಿಎಸ್‌ಟಿ ಕುರಿತ ರಾಜ್ಯ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ್ರು.
ಸಿಎ ನಿತಿನ್ ಶೆಟ್ಟಿ ಮಾತನಾಡಿ, ನಿರ್ಮಿತಿ ಕೇಂದ್ರ ಯಾವುದೇ ಲಾಭದ ನಿರೀಕ್ಷೆಯಿಲ್ಲದೆ ಸರಕಾರದ ಅನುದಾನ ಸದ್ಬಳಕೆ ಮಾಡಿ ಕಾಮಗಾರಿ ಮಾಡಿಕೊಡುವ ಸ್ವತಂತ್ರ ಸಂಸ್ಥೆಯಾಗಿದೆ ಎಂದ್ರು.
ನಿರ್ಮಿತಿ ಕೇಂದ್ರದ ನಿರ್ದೇಶಕ ರಾಜೇಂದ್ರ ಕಲ್ಬಾವಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಮಟ್ಟದ ನಿರ್ಮಿತಿ ಕೇಂದ್ರದ ಸಿಬ್ಬಂದಿಗೆ ಜಿಎಸ್‌ಟಿ ಕಾರ್ಯಗಾರ ಆಯೋಜಿಸಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದ್ರು.  ಈ ಸಂದರ್ಭ ಕಾಲಿನ್ ರೊಡ್ರಿಗಸ್, ಪುಷ್ಪಾ ನೂರಕ್ಕೂ ಮಿಕ್ಕಿ ಸಿಬ್ಬಂದಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ರು.

Related posts

Leave a Reply

Your email address will not be published. Required fields are marked *