Header Ads
Header Ads
Breaking News

ರಾಜ್ಯ ಮಟ್ಟದ ಪ್ರತಿಭಾನ್ವೇಷಣೆ ಪ್ರೀಯುನಿಕ್-2017 ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯಕ್ರಮ

ಮಂಗಳೂರಿನ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ಸಾಹಿತ್ಯ-ಸಾಂಸ್ಕೃತಿಕ ವೈಭವ ಪ್ರತಿಭಾನ್ವೇಷಣೆ ಪ್ರಿಯುನಿಕ್ ಕಾರ್ಯಕ್ರಮ ಎರಡು ದಿನಗಳ ಕಾಲ ನಡೆಯಲಿದ್ದು, ಇಂದು ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಒಂದು ಮೊಟ್ಟೆಯ ಕತೆ ಕನ್ನಡ ಚಲನಚಿತ್ರದ ನಾಯಕನಟ ರಾಜ್.ಬಿ ಶೆಟ್ಟಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಬಾಲ್ಯದ ಶಾಲಾ ದಿನಗಳನ್ನು ನೆನಪಿಸಿಕೊಂಡ ಅವರು ಎಳವೆಯಲ್ಲಿಯೇ ಮಕ್ಕಳು ಸಾಂಸ್ಕೃತಿಕ ಅಥವಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ತೋರ್ಪಡಿಸುವ ಅಗತ್ಯವಿದೆ ಎಂದರು.

ಇದೇ ವೇಳೆ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ಪ್ರಭಾರ ರೆಕ್ಟರ್ ರೆವರೆಂಡ್ ಫಾದರ್ ಡೈನೇಶಿಯಸ್ ವಾಸ್ ಎಸ್ ಜೆ ಮಾತನಾಡಿ, ಶೈಕ್ಷಣಿಕ ಪ್ರಗತಿಯೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಪ್ರತಿಭಾ ವಿಕಸನಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ವ್ಯಕ್ತಿತ್ವ ವಿಕಸನದ ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳನ್ನು ನಮ್ಮ ಕಾಲೇಜಿನಲ್ಲಿ ಹಮ್ಮಿಕೊಂಡು ಬರುತ್ತೇವೆ ಎಂದು ಹೇಳಿದ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಪ್ರತಿಭಾನ್ವೇಷಣೆ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳ ೪೨ ಸ್ಪರ್ಧೆಗಳ ಕಾಲೇಜು ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆಯಲಿದೆ. ೬೦ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆವರೆಂಡ್ ಫಾದರ್ ಮೆಲ್ವಿನ್ ಮೆಂಡೋನ್ಸಾ, ಉಪ ಪ್ರಾಂಶುಪಾಲರಾದ ಪ್ರೊ. ಶಾಲೆಟ್ ಡಿಸೋಜಾ, ಸಂಯೋಜಕರಾದ ಕುಮಾರಿ ದೀಪ್ತಿ ರಾಣಿ, ಕುಮಾರಿ ತಾನಿಯಾ ಪೈಸ್, ಇನಾಸ್ ಡಯಾಸ್ ಉಪಸ್ಥಿತರಿದ್ದರು.

ವರದಿ: ಶರತ್