Header Ads
Header Ads
Header Ads
Breaking News

ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಸಚಿವರ ಭೇಟಿ : ದ.ಕ. ಜಿಲ್ಲೆಯ 19 ಬೇಡಿಕೆ ಈಡೇರಿಕೆಗೆ ಮನವಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ಘಟಕದ ಪದಾಧಿಕಾರಿಗಳು ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಅವರೊಂದಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿಯಾಗಿ ನಮ್ಮ ಜಿಲ್ಲೆಯ 19 ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಿದ್ದರು. ಸಚಿವರು ಜನವರಿ 15ರ ಒಳಗಡೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಿಕೊಡುವ ಭರವಸೆ ಕೊಟ್ಟಿದ್ದಾರೆ. ಸುಳ್ಯ ತಾಲೂಕಿನ ರೈತರು ತಮ್ಮ ಸಮಸ್ಯೆ ಅಹವಾಲುಗಳನ್ನು ತಿಳಿಸಲು ಆ ದಿನ ಅವಕಾಶವಿರುತ್ತದೆ. ಸಾಲಮನ್ನಾ ಜನವರಿ 10 ಒಳಗೆ ಎಲ್ಲಾ ರೈತರ ಖಾತೆಗಳಿಗೆ ಜಮಾಮಾಡಬೇಕು ಇಲ್ಲವಾದಲ್ಲಿ ಸಹಕಾರಿ ಸಂಘಗಳ ಆಡಳಿತ ಮಂಡಳಿ ಚುನಾವಣಾ ಬಹಿಷ್ಕರಿಸುತ್ತೇವೆ ಎಂಬ ರೈತರ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗೂ ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ ಡಿ.ಅರ್ ಪ್ರವೀಣ್ ಅವರು 15 ದಿನಗಳಲ್ಲಿ ಜಮಾ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *