Header Ads
Breaking News

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ- ಮಂಗಳೂರಿನಲ್ಲಿ ಸಚಿವ ಸೋಮಶೇಖರ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್‌ಗೆ ಬಿಟ್ಟ ವಿಚಾರ, ಯಾರೂ ಕೂಡ ಸಚಿವ ಸ್ಥಾನದ ಪೈಪೋಟಿಯಲ್ಲಿ ಇಲ್ಲ ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಇತ್ತು. ಅದಕ್ಕಾಗಿ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಮೇಶ್ ಕತ್ತಿ, ಉಮೇಶ್ ಕತ್ತಿ, ಲಕ್ಷ್ಮಣ್ ಸವದಿಯವರು ಮೀಟಿಂಗ್ ಮಾಡಿದ್ದಾರಷ್ಟೇ, ಡಿಸಿಸಿ ಬ್ಯಾಂಕ್ ಚುನಾವಣೆಯ ಉದ್ದೇಶದಿಂದ ಮಾತ್ರ ಮೀಟಿಂಗ್ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

 

Related posts

Leave a Reply

Your email address will not be published. Required fields are marked *