Header Ads
Header Ads
Breaking News

ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಪ್ರತಿಭಟನೆ

ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಮಂಗಳೂರು ಕ್ಷೇತ್ರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.ಪ್ರತಿಭಟನೆ ಉದೇಶಿಸಿ ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ ರಾಜ್ಯದ ಅಭಿವೃದ್ಧಿ ಝೀರೋ ಆಗಿದೆ. ವಿಧಾನಸೌಧದಲ್ಲಿ ಸಚಿವರುಗಳ ಆಪ್ತರ ಜತೆಗೆ ನಿರಂತರ ಲಕ್ಷ ಹಣದ ಕಂತೆಗಳು ಸಾಗುತ್ತಲೇ ಇದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯದ ಸಮ್ಮಿಶ್ರ ಸರಕಾರ ಮುಖ್ಯಮಂತ್ರಿ ಹಾಗೂ ಸಚಿವರುಗಳು ಶೀಘ್ರವೇ ರಾಜೀನಾಮೆ ನೀಡಬೇಕು. ಕಾಮಗಾರಿ ಆರಂಭವಾದಾಗ ಜಾಗವನ್ನು ಅತಿಕ್ರಮಿಸಿ ಕೊಡುವ ಜವಾಬ್ದಾರಿ ರಾಜ್ಯ ಸರಕಾರದ್ದಾಗಿತ್ತು. ಆ ಪ್ರಕ್ರಿಯೆ ಈವರೆಗೂ ಮುಗಿಯದಿದ್ದರೂ, ಸಂಸದರ ಮೇಲೆ ಗೂಬೆ ಕೂರಿಸುವ ಕೆಲಸ ನಾಚಿಕೆಗೇಡು ಎಂದು ಆರೋಪಿಸಿದರು. ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್. ಅಂದಿನ ನೆಹರೂ ಕಾಲದಿಂದ ಇಂದಿನವರೆಗೂ ಕಾಂಗ್ರೆಸ್ ಹಲವು ರೀತಿಯಲ್ಲಿ ಭ್ರಷ್ಟಾಚಾರವನ್ನು ನಡೆಸುತ್ತಲೇ ಬಂದಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿ.ಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ಉಚ್ಚಿಲ್, ರಾಜ್ಯ ಸಮಿತಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಉಪಾಧ್ಯಕ್ಷ ಯಶವಂತ ಅಮೀನ್, ಹರಿಯಪ್ಪ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply