
ಪುತ್ತೂರಿನಲ್ಲಿ ರಾಜ್ಯ ಹೆದ್ದಾರಿಯಲ್ಲಿರುವ ಅಕ್ರಮ ಕಟ್ಟಡ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಸಂತ್ರಸ್ತರಿಂದ ನರಿಮೊಗರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡರು. ರಾಜ್ಯ ಹೆದ್ದಾರಿ ಸುಬ್ರಹ್ಮಣ್ಯ ಮತ್ತು ಮಂಜೇಶ್ವರಗಳಲ್ಲಿ ಇದ್ದಂತಹ ಅಕ್ರಮವಾಗಿ ನಿರ್ಮಿಸಿದ್ದ ಹತ್ತಾರು ಕಟ್ಟಡ ಗೂಡಂಗಡಿಗಳನ್ನು ತೆರವು ಮಾಡಿದ್ದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ವಿನಯ್ ಕುಮಾರ್ ಸೊರಕೆ ಪಾಲ್ಗೊಂಡಿದ್ದರು.