Header Ads
Breaking News

ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಮೊದಲ ಸಭೆ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಮೊದಲ ಸಭೆ ನಡೆಯಿತು. ಈ ಬಗ್ಗೆ ಟ್ರಸ್ಟ್ ನ ಸದಸ್ಯರೂ ಆಗಿರುವ ಪೇಜಾವರ ಮಠದ ಕಿರಿಯ ಯತಿ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಮಾಹಿತಿ ನೀಡಿದ್ದಾರೆ. ಅಯೋಧ್ಯಾ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆ ನಡೆಯಿತು.ರಾಮ ಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲರನ್ನು ಸ್ಮರಣೆ ಮಾಡಲಾಗಿದೆ. ಸಭೆಗೆ ಅವಕಾಶ ಮಾಡಿಕೊಟ್ಟ ಸರ್ವೋಚ್ಛ ನ್ಯಾಯಾಲಯಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಪೇಜಾವರ ಮಠದ ವತಿಯಿಂದ ರಾಮಮಂದಿರ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಮೊದಲ ದೇಣಿಗೆಯನ್ನು ವಿಶ್ವೇಶತೀರ್ಥ ಸ್ವಾಮೀಜಿ ಹೆಸರಲ್ಲಿ ನೀಡಿದ್ದೇವೆ. ಉಡುಪಿ ಕೃಷ್ಣಮಠದ ಪ್ರಸಾದವನ್ನು ಟ್ರಸ್ಟ್ ಸದಸ್ಯರಿಗೆ ನೀಡಿದ್ದೇವೆ. ಮಂದಿರ ನಿರ್ಮಾಣಕ್ಕೆ ಸಾರ್ವಜನಿಕರು ದೇಣಿಗೆ ಕೊಡುವ ಅವಕಾಶ ಇದೆ.ಮೊತ್ತವನ್ನು ನೇರ ಬ್ಯಾಂಕ್ ಖಾತೆಗೆ ಹಾಕುವ ವ್ಯವಸ್ಥೆ ಮಾಡಲಾಗಿದೆ. ರಾಮ ಮಂದಿರ ಶಾಸ್ತ್ರೋಕ್ತವಾಗಿ ನಿರ್ಮಾಣವಾಗಬೇಕೆಂಬ ತೀರ್ಮಾನ ಕೈಗೊಳ್ಳಲಾಗಿದೆ. ದೇಶಾದ್ಯಂತ ದೇಗುಲ, ಮನೆಗಳಲ್ಲಿ ರಾಮಜಪ ಪಾರಾಯಣಕ್ಕೆ ತೀರ್ಮಾನ.ಮಂದಿರ ನಿರ್ಮಾಣದವರೆಗೆ ದೇಶಾದ್ಯಂತ ರಾಮಾಯಣ ಪಾರಾಯಣ ನಡೆಯಲಿದೆ.ಮಂದಿರ ನಿರ್ಮಾಣಕ್ಕೆ ವಿಶೇಷ ಸಮಿತಿಯೊಂದನ್ನು ರಚಿಸಲು ಇಂದು ತೀರ್ಮಾನಿಸಲಾಯಿತು ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದರು.

Related posts

Leave a Reply

Your email address will not be published. Required fields are marked *