Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ರಾಷ್ಟ್ರಮಟ್ಟದ ಅಂತರ ಕಾಲೇಜು ಉತ್ಸವ ಸಂತ ಅಗ್ನೇಸ್ ಕಾಲೇಜಿನಲ್ಲಿ ಮಿಲಾಂಜ್ 2018 ಜ.5 ರಂದು ಸಾಂಸ್ಕೃತಿಕ, ಭೌದ್ಧಿಕ, ಸಾಮಾನ್ಯ ಸ್ಪರ್ಧೆ

 

ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನಲ್ಲಿ 1 ದಿನದ ರಾಷ್ಟ್ರಮಟ್ಟದ ಅಂತರ ಕಾಲೇಜು ಉತ್ಸವ ಮಿಲಾಂಜ್ 2018 ಜನವರಿ 5 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಮ್. ಜೆಶ್ವಿನ ಹೇಳಿದರು.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಫೆಸ್ಟ್‌ನ ಸ್ಪರ್ಧೆಗಳು ಸಾಂಸ್ಕೃತಿಕ, ಭೌದ್ಧಿಕ ಮತ್ತು ಸಾಮಾನ್ಯ ಎಂಬ ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಉತ್ಸವದಲ್ಲಿರುವ ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಅವರಲ್ಲಡಗಿರುವ ಸುಪ್ತ ಪ್ರತಿಭೆಗಳನ್ನು ತೋರ್ಪಡಿಸಲು ಒಂದು ವೇದಿಕೆಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಯೋಜಕರಾದ ಮರಿನಾ ಲೋಬೊ, ಮೃಣಾಲಿ ಉಪಸ್ಥಿತರಿದ್ದರು.

ವರದಿ: ಶರತ್

Related posts

Leave a Reply