Header Ads
Header Ads
Breaking News

ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡಿ, ಮಂಗಳೂರಿನಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ

ರೈತರು ಸಹಕಾರಿ ಸಂಘಗಳಲ್ಲಿ ಪಡೆದಿರುವ ಸಾಲಗಳನ್ನು ಮನ್ನಾ ಮಾಡಬೇಕು. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಎಲ್ಲಾ ಸಾಲಗಳನ್ನು ಮನ್ನಾ ಮಾಡಬೇಕೆಂದು ಒತ್ತಾಯಿಸಿ, ರಾಜ್ಯಾದ್ಯಂತ ನಡೆಯಿತ್ತಿರುವ ಧರಣಿ ಸತ್ಯಾಗ್ರಹ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಡೆಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸಬೇಕು. ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆಯನ್ನು ಜಿಲ್ಲಾಧ್ಯಕ್ಷ ರವಿ ಕಿರಣ್ ಪುಣಚ ಖಂಡಿಸಿದರು. ಪ್ರಸ್ತುತ ಹಿಂಗಾರು ಮತ್ತು ಮುಂಗಾರು ಬೆಳೆಗಳಲ್ಲಿ ನಷ್ಟ ಸಂಭವಿಸಿದ್ದು, ರೈತರು ಕಂಗಾಲಾಗಿದ್ದಾರೆ, ಹಾಗಾಗಿ ಎಲ್ಲ ಸಾಲ ಮನ್ನಾ ಮಾಡಬೇಕು ಮತ್ತು ಪ್ರಸಕ್ತ ಹೊಸ ಸಾಲ ವ್ಯವಸ್ಥೆ ಮಾಡಬೇಕೆಂದು ಇದೇ ವೇಳೆ ಪುಣಚ ಆಗ್ರಹಿಸಿದರು. ಈ ವೇಳೆ ನೂರಾರು ಮಂದಿ ರೈತ ಮುಖಂಡರು ಇದ್ದರು.

Related posts

Leave a Reply