
ಉಜಿರೆ, ಫೆ.1: ಮಧ್ಯಪ್ರದೇಶದ ಭೋಪಾಲ್ನಲ್ಲಿ ಇತ್ತೀಚೆಗೆ ನಡೆದ 18ನೇ ರಾಷ್ಟ್ರೀಯ ಫೆಡರೇಷನ್ ಕಪ್ ಜ್ಯೂನಿಯರ್ ಅಂಡರ್ 20 ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಉಜಿರೆ ಶ್ರೀ ಧ.ಮ.ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ರಕ್ಷಿತ್ ಅವರು 400 ಮೀಟರ್ ಹರ್ಡಲ್ಸ್ನಲ್ಲಿ ಬಂಗಾರದ ಪದಕ ಪಡೆದಿದ್ದಾರೆ.ಮೂಡುಬಿದರೆಯಲ್ಲಿ ನಡೆದಿದ್ದ 36ನೇ ರಾಜ್ಯ ಅಮೆಚೂರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದ ರಕ್ಷಿತ್ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.