Header Ads
Header Ads
Breaking News

ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಆಗಸ್ಟ್ 10 ರಂದು ಆಚರಣೆ

 

ಜಂತುಹುಳ ನಿವಾರಣಾ ದಿನವಾಗಿ ೨೦೧೭ ಆಗಸ್ಟ್ ೧೦ರಂದು ಆಚರಿಸಲಾಗುತ್ತದೆ. ೧ರಿಂದ ೧೯ ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ ಮಕ್ಕಳಿಗೆ ಜಂತುಹುಳ ಮಾತ್ರೆ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ರಾವ್ ತಿಳಿಸಿದರು.

ಅವರು ಮಂಗಳೂರಿನಲ್ಲಿ ಮಾಹಿತಿ ನೀಡಿ ಆಗಸ್ಟ್ ೧೦ರಂದು ಜಂತುಹುಳ ಮಾತ್ರೆ ಪಡೆಯದೆ ಬಾಕಿ ಇರುವ ಮಕ್ಕಳಿಗೆ ಮತ್ತು ಅಂಗನವಾಡಿಯಲ್ಲಿ ದಾಖಲಾಗದ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆಗಸ್ಟ್ ೧೭ರ ಮಾಪ್-ಅಪ್ ದಿನದಂದು ಆಶಾ, ಅಂಗನವಾಡಿ ಕಾರ್ಯಕರ್ತೆಯವರು ಮತ್ತು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಜಂತುಹುಳ ಮಾತ್ರೆ ನೀಡುತ್ತಾರೆ. ಅಲ್ಲದೆ ಎಲ್ಲಾ ಸರ್ಕಾರಿ ಶಾಲೆ ಮತ್ತು ಅನುದಾನಿ ಶಾಲೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ೧ರಿಂದ ೧೯ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದರು.
ವರದಿ: ನಾಗರಾಜ್ ಮಂಗಳೂರು

Related posts

Leave a Reply