Header Ads
Header Ads
Breaking News

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಉಪಾಧ್ಯಕ್ಷ ಎಲ್. ಮುರುಗನ್ ಭೇಟಿ ಪುತ್ತೂರು ತಾಲೂಜಿನ ದಲಿತ ಸಂತ್ರಸ್ತರ ನಿವಾಸಕ್ಕೆ ಭೇಟಿ ನೀಡಿದ ಮುರುಗನ್

 

ಅನುದಾನಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಎಷ್ಟು ಸೀಟು ನೀಡಲಾಗಿದೆ ಎಂದು ವಿಚಾರಣೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಉಪಾಧ್ಯಕ್ಷ ಎಲ್. ಮುರುಗನ್ ಹೇಳಿದರು.ತಾಲೂಕಿನ ದಲಿತ ಸಂತ್ರಸ್ತರ ನಿವಾಸಕ್ಕೆ ಭೇಟಿ ನೀಡಿ, ಬಳಿಕ ಪುತ್ತೂರಿನಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 750ರಷ್ಟು ಅನುದಾನಿತ ಶಾಲೆಗಳಿವೆ. ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸೀಟು ನೀಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವರದಿ ತರಿಸಿಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.ಜಿಲ್ಲೆಯ ಇತರ ವರ್ಗಗಳಿಗೆ ಹೋಲಿಸಿದರೆ ದಲಿತ ಮಹಿಳೆಯರ ಸಾಕ್ಷರತೆಯ ಪ್ರಮಾಣ ತುಂಬಾ ಕೆಳಗಿರುವುದು ಗಮನಕ್ಕೆ ಬಂದಿದೆ. ಅವರ ಸಾಕ್ಷರತಾ ಪ್ರಮಾಣ ಹೆಚ್ಚು ಮಾಡಲು ಕ್ರಮ ಕೈಗೊಳ್ಳುವಂತೆಯೂ ಜಿಲ್ಲಾಡಳಿತಕ್ಕೆ ಸೂಚಿಸಿರುವುದಾಗಿ ಮಾಹಿತಿ ನೀಡಿದರು.ಕೆಲವು ಪ್ರಕರಣಗಳ ಸಂತ್ರಸ್ತರಿಗೆ ಪರಿಹಾರ ಧನ ನೀಡುವ ಬಗ್ಗೆಯೂ ಅವರು ವಿವರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎಂ.ಆರ್. ರವಿ, ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ, ಹೆಚ್ಚುವರಿ ಎಸ್ಪಿ ವಿ.ಜೆ. ಸಜಿತ್, ಡಿವೈಎಸ್ಪಿ ಶ್ರೀನಿವಾಸ್ ಪಿ.ಎಸ್. ಮೊದಲಾದವರು ಉಪಸ್ಥಿತರಿದ್ದರು.