Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ರಾಷ್ಟ್ರೀಯ ವೈದ್ಯಕೀಯ ಆಯೋಗದ ನೂತನ ಕಾಯ್ದೆಗೆ ವಿರೋಧ ಪುತ್ತೂರಿನಲ್ಲಿ ವೈದ್ಯಕೀಯ ಸಂಘದಿಂದ ಬಂದ್‌ಗೆ ಬೆಂಬಲ

ರಾಷ್ಟ್ರೀಯ ವೈದ್ಯಕೀಯ ಆಯೋಗದ ನೂತನ ಕಾಯ್ದೆಯನ್ನು ವಿರೋಧಿಸಿ ಇಂದು ದೇಶದಾದ್ಯಂತ ಕರೆ ನೀಡಿರುವ ಖಾಸಗಿ ಆಸ್ಪತ್ರೆಗಳ ಬಂದ್‌ಗೆ ಪುತ್ತೂರು ವೈದ್ಯಕೀಯ ಸಂಘವೂ ಬೆಂಬಲ ವ್ಯಕ್ತ ಪಡಿಸಿದೆ.

ಈ ಹಿನ್ನಲೆಯಲ್ಲಿ ಪುತ್ತೂರಿನ ಬಹುತೇಕ ಎಲ್ಲಾ ಖಾಸಗಿ ಆಸ್ಪತ್ರೆಗಳು ತನ್ನ ಹೊರರೋಗಿ ತಪಾಸಣಾ ವಿಭಾಗದ ಸೇವೆಯನ್ನು ಬಂದ್ ಮಾಡಿದ್ದು, ಒಳರೋಗಿಗಳಿಗೆ ಹಾಗೂ ಶಸ್ತ್ರಚಿಕಿತ್ಸೆಯಂಥಹ ಸೇವೆಯನ್ನು ಮುಂದುವರಿಸಿದೆ. ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಖಾಸಗಿ ಆಸ್ಪತ್ರೆಗಳು ಬಂದ್‌ನಲ್ಲಿ ಭಾಗವಹಿಸಲಿದ್ದು, ಸಂಜೆ 6 ರ ಬಳಿಕ ಎಂದಿನಂತೆ ತನ್ನ ಸೇವೆಯನ್ನು ಮುಂದುವರಿಸಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಂಡ ಹಿನ್ನಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಜನ ಇದೀಗ ಸರಕಾರಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ.

ವರದಿ: ಪ್ರವೀಣ್ ಪುತ್ತೂರು

Related posts

Leave a Reply