Header Ads
Breaking News

ರೌಡಿಶೀಟರ್ ಪಿಂಕಿ ನವಾಝ್ ಕೊಲೆಯತ್ನ ಪ್ರಕರಣ : ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯ ಬಂಧನ

ನಗರ ಹೊರವಲಯದ ಕಾಟಿಪಳ್ಳದ ರೌಡಿಶೀಟರ್ ಪಿಂಕಿ ನವಾಝ್ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಸುರತ್ಕಲ್ ಹಾಗೂ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾಟಿಪಳ್ಳ ಕೃಷ್ಣಾಪುರ ನಿವಾಸಿಗಳಾದ ಪ್ರಕಾಶ್ ಭಂಡಾರಿ (29), ಶಾಕೀಬ್ (29) ಶೈಲೇಶ್ ಪೂಜಾರಿ (19), ಹನೀಫ್ (20), ಸುವಿನ್ ಕಾಂಚನ್ (23), ಲಕ್ಷ್ಮೀಶ್ (26), ಅಹ್ಮದ್ ಸಾದಿಕ್ (23), ನಿಸಾರ್ ಹುಸೈನ್ (29), ರಂಜನ್ ಶೆಟ್ಟಿ (24) ಬಂಧಿತ ಆರೋಪಿಗಳು.

ಫೆಬ್ರವರಿ 10ರಂದು ಸಂಜೆ ವೇಳೆಗೆ ಈ ಘಟನೆ ನಡೆದಿತ್ತು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಸುರತ್ಕಲ್ ಪೊಲೀಸರು ಕೊಲೆಯತ್ನ ನಡೆಸಿದ ಆರೋಪದಲ್ಲಿ ನಾಲ್ವರು ಹಾಗೂ ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಐವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ ಕಾರು, ಮಾರಕಾಸ್ತ್ರಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಹಳೆ ದ್ವೇಷದಿಂದಲೇ ಕೃತ್ಯ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *