Header Ads
Header Ads
Breaking News

ಕುರ್ನಾಡು ಮುಂದಿನ ದಿನಗಳಲ್ಲಿ ಮಾದರಿ ಗ್ರಾಮವಾಗಿ ರೂಪುಗೊಳ್ಳಲಿದೆ : ಸಂತೋಷ್ ಕುಮಾರ್ ರೈ ಬೋಳಿಯಾರ್ ಅಭಿಪ್ರಾಯ

ಕುರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಗಳ ಮೂಲಕ ಜಿಲ್ಲೆಯಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದು, ಮುಂದಿನ ದಿನಗಳಲ್ಲಿ ಮಾದರಿ ಗ್ರಾಮವಾಗಿ ರೂಪುಗೊಳ್ಳಲಿದೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಾರತೀಯ ಜನತಾ ಪಕ್ಷದ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅಭಿಪ್ರಾಯಪಟ್ಟರು.ಕುರ್ನಾಡು ಗ್ರಾಮ ಪಂಚಾಯತ್‌ನ ಕಾಯರ್‌ಗೋಳಿ- ಬಂಗ್ಲೆ ರಸ್ತೆ ಡಾಮರೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಬಿಜೆಪಿ ಮುಖಂಡ ಟಿ.ಜಿ.ರಾಜಾರಾಮ ಭಟ್ ಮಾತನಾಡಿ ಗ್ರಾಮ ಮಟ್ಟದಲ್ಲಿ ಅಭಿವೃದ್ಧಿಯಾದಾಗ ಕ್ಷೇತ್ರದೊಂದಿಗೆ ದೇಶ ಅಭಿವೃದ್ಧಿಯಾಗಲು ಸಾಧ್ಯ ಈ ನಿಟ್ಟಿನಲ್ಲಿ ಕುರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿಯ ಪಥದೊಂದಿಗೆ ಮ್ನುಡೆಯುತ್ತಿರುವುದು ಶ್ಲಾಘನೆಯಾಗಿದ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ನವೀನ್ ಪಾದಲ್ಪಾಡಿ, ಕುರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಜಾ ಮಿತ್ತಕೋಡಿ, ಉಪಾಧ್ಯಕ್ಷ ನಿತಿನ್ ಗಟ್ಟಿ ಕುರ್ನಾಡು, ಸದಸ್ಯರಾದ ಗೋಪಾಲ ಬಂಗೇರ, ಶಿವಶಂಕರ ಭಟ್, ಗಣಪತಿ ಭಟ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *