Header Ads
Header Ads
Breaking News

ಲೈಟ್ ಫಿಶಿಂಗ್ – ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧಿಸಲು ಆಗ್ರಹ- ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಕಚೇರಿಯ ಎದುರು ಧರಣಿ

ಲೈಟ್ ಫಿಶಿಂಗ್ ಮತ್ತು ಬುಲ್‌ಟ್ರಾಲ್ ಮೀನುಗಾರಿಕೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಸಾಂಪ್ರದಾಯಿಕ ಮೀನುಗಾರರು ಮತ್ತು ಮಂಗಳೂರು ಟ್ರಾಲ್‌ಬೋಟ್ ಮೀನುಗಾರರ ಸಂಘದ ನೇತೃತ್ವದಲ್ಲಿ ಧರಣಿ ಮುಷ್ಕರ ನಡೆಯಿತು. ನಗರದ ಬಂದರು ದಕ್ಕೆಯಲ್ಲಿರುವ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಕಚೇರಿಯ ಎದುರು ಧರಣಿ ನಡೆಯಿತು.ಕೆಲವು ಮೀನುಗಾರರು ನಿಯಮ ಉಲ್ಲಂಘಿಸಿ ಲೈಟ್ ಫಿಶಿಂಗ್ ಮತ್ತು ಬುಲ್‌ಟ್ರಾಲ್ ಮೀನುಗಾರಿಕೆ ನಡೆಸಿರುವುದು ಖಂಡನೀಯ. ಈ ಸಮಸ್ಯೆಯನ್ನು ನಿಭಾಯಿಸಲು ಇಲಾಖಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಬೇಕು ಎಂದು ಮಂಗಳೂರು ಟ್ರಾಲ್‌ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ನಿತಿನ್ ಕುಮಾರ್ ಒತ್ತಾಯಿಸಿದರು.

ಈ ವೇಳೆ ಉಪಾಧ್ಯಕ್ಷ ಅಬ್ಬಾಸ್ ಹಾಜಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಉಳ್ಳಾಲ್, ಕೋಶಾಧಿಕಾರಿ ಇಬ್ರಾಹೀಂ ಬೆಂಗರೆ, ಜೊತೆ ಕಾರ್ಯದರ್ಶಿ ಸಂದೀಪ್ ಮತ್ತಿತರರು ಧರಣಿಯಲ್ಲಿ ಭಾಗವಹಿಸಿದರು.

Related posts

Leave a Reply