Header Ads
Header Ads
Breaking News

ಲೋಕಸಭಾ ಚುನಾವಣೆಯಲ್ಲಿ 25-26 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ : ಐವನ್ ಡಿಸೋಜಾ ಹೇಳಿಕೆ

 ಮುಂಬರುವ ಲೋಕಾಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25ರಿಂದ 27 ಕ್ಷೇತ್ರಗಳನ್ನು ಮೈತ್ರಿ ಸರ್ಕಾರ ಗೆಲುವು ಸಾಧಿಸಲಿದೆ ಅಂತಾ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 28 ಕ್ಷೇತ್ರಗಳನ್ನು ಗೆಲುವು ಸಾಧಿಸಬೇಕೆಂದು ಸಮಿಶ್ರ ಸರ್ಕಾರ ಉದ್ದೇಶವಾಗಿದೆ. ದೇಶದಲ್ಲಿ ಕಾಂಗ್ರೆಸ್ 190ರಿಂದ 240 ಸೀಟುಗಳನ್ನು ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಬಿಜೆಪಿ 13 ಸೀಟುಗಳನ್ನು ಗೆಲುವು ಸಾಧಿಸಲಿದೆ ಎಂದು ಸರ್ವೇ ಹೇಳಿದೆ. ಇದನ್ನ ತಿಳಿದ ಬಿಜೆಪಿ ನಾಯಕರು ರಾಜ್ಯದಲ್ಲಿರುವ ಸಮಿಶ್ರ ಸರ್ಕಾರಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡುವ ಕೆಲಸ ಮಾಡುತ್ತಿದ್ದಾರೆ. ಬಿಎಸ್‍ವೈ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂದು ಅವರು ಹೇಳಿದರು.

Related posts

Leave a Reply